Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:4 - ಕನ್ನಡ ಸತ್ಯವೇದವು J.V. (BSI)

4 ಯೇಸು ಆಕೆಗೆ - ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯವು ಇನ್ನೂ ಬಂದಿಲ್ಲ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಯೇಸು, “ಅಮ್ಮಾ, ಇದನ್ನು ನನಗೇಕೆ ಹೇಳುತ್ತೀ? ನನ್ನ ಗಳಿಗೆ ಇನ್ನೂ ಬಂದಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು, “ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯ ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೇಸು ಆಕೆಗೆ, “ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಜೆಜುನ್, “ಹೆ ಬಾಯ್, ಮಿಯಾ ಕಾಯ್ ಕರುಚೆ? ಮನುನ್ ತಿಯಾ ಮನುಲೆ? ಮಾಜೊ ನೆಮಸಲ್ಲೊ ಎಳ್ ಅಜುನ್ ಯೆವ್ಕ್ ನಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:4
20 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ನನ್ನ ಸಮಯವು ಇನ್ನೂ ಬಂದಿಲ್ಲ; ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.


ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.


ಆಗ ಯೇಸು ಅವರಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ - ಮನುಷ್ಯಕುಮಾರನು ತನ್ನ ಮಹಿಮೆಯ ಪದವಿಯನ್ನು ಹೊಂದುವ ಸಮಯ ಬಂದದೆ.


ಪ್ರತಿಯೊಂದು ಕಾರ್ಯಕ್ಕೂ ಕಾಲವು ಕ್ಲುಪ್ತವಾಗಿದೆ; ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.


ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.


ಅದಕ್ಕೆ ದಾವೀದನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈಹೊತ್ತು ನನ್ನನ್ನು ಅಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿವಸದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವದು ಸರಿಯೋ? ನಾನು ಇಸ್ರಾಯೇಲ್ಯರ ಅರಸನೆಂಬದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು ಎಂದು ನುಡಿದನು.


ಅದಕ್ಕೆ ಅರಸನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿರಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ನೀನು ಹೀಗೇಕೆ ಮಾಡಿದಿ ಎಂದು ಅವನನ್ನು ಯಾರು ಕೇಳಬಹುದು ಎಂದು ಉತ್ತರಕೊಟ್ಟನು.


ಯೇಸು ಆಕೆಯನ್ನು - ಅಮ್ಮಾ, ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ? ಎಂದು ಕೇಳಲು ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ - ಅಯ್ಯಾ, ನೀನು ಆತನನ್ನು ಎತ್ತಿಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ನನಗೆ ಹೇಳು; ನಾನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದಳು.


ಅವರು ಆಕೆಯನ್ನು - ಅಮ್ಮಾ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆ - ನನ್ನ ಸ್ವಾವಿುಯನ್ನು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.


ಆತನು ಅವರಿಗೆ - ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದದ್ದು ನಿಮಗೆ ತಿಳಿಯಲಿಲ್ಲವೇ? ಎಂದು ಉತ್ತರಕೊಟ್ಟನು.


ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ಪರಿಚಯವಿಲ್ಲವೆಂದೂ ಅಣ್ಣತಮ್ಮಂದಿರನ್ನು ಅರಿಯೆವೆಂದೂ ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ ಹೇಳಿ ಬಿಟ್ಟರಲ್ಲಾ.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ಆಗ ಆ ಸ್ತ್ರೀಯು ಎಲೀಯನಿಗೆ - ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು [ದೇವರ] ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವದಕ್ಕೆ ಬಂದಿಯೋ ಎನ್ನಲು ಅವನು ಆಕೆಗೆ -


ದ್ರಾಕ್ಷಾರಸವು ಸಾಲದೆ ಹೋಗಲಾಗಿ ಯೇಸುವಿನ ತಾಯಿ ಆತನಿಗೆ - ಅವರಲ್ಲಿ ದ್ರಾಕ್ಷಾರಸವಿಲ್ಲ ಎಂದು ಹೇಳಿದಳು.


ನೀವೇ ಜಾತ್ರೆಗೆ ಹೋಗಿರಿ; ನನ್ನ ಸಮಯವು ಇನ್ನೂ ಒದಗದೆ ಇರುವದರಿಂದ ನಾನು ಈ ಜಾತ್ರೆಗೆ ಈಗ ಹೋಗುವದಿಲ್ಲವೆಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು