Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:5 - ಕನ್ನಡ ಸತ್ಯವೇದವು J.V. (BSI)

5 ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸುವಿನ ತಾಯಿ ಸೇವಕರಿಗೆ, “ಯೇಸು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸುವಿನ ತಾಯಿಯು ಸೇವಕರಿಗೆ, “ಆತನು ನಿಮಗೆ ಹೇಳಿದಂತೆ ಮಾಡಿರಿ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜೆಜುಚ್ಯಾ ಬಾಯ್ನ್ ಆಳಾಕ್ನಿ, “ತೊ ಕಾಯ್ ಸಾಂಗ್ತಾ ತೆ ತುಮಿ ಕರಾ” ಮನುನ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:5
12 ತಿಳಿವುಗಳ ಹೋಲಿಕೆ  

ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.


ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ ಅಂದನು.


ಐಗುಪ್ತದೇಶಕ್ಕೆಲ್ಲಾ ಬರಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟುಕೊಂಡರು. ಅವನು ಅವರಿಗೆ - ಯೋಸೇಫನ ಬಳಿಗೆ ಹೋಗಿರಿ, ಅವನ ಮಾತಿನ ಮೇರೆಗೆ ಮಾಡಿರಿ ಎಂದು ಹೇಳಿದನು.


ಆತನು ಜನರ ಗುಂಪುಗಳ ಸಂಗಡ ಇನ್ನೂ ಮಾತಾಡುತ್ತಿರುವಾಗ ಆತನ ತಾಯಿಯೂ ಸಹೋದರರೂ ಆತನನ್ನು ಮಾತಾಡಿಸಬೇಕೆಂದು ಹೊರಗೆ ನಿಂತಿದ್ದರು.


ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲಮೇಲಣ ಹೊದಿಕೆಯನ್ನು ತೆಗೆದುಬಿಟ್ಟು ಮಲಗಿದಳು.


ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಾನನ್ನು ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಈಚೆಗೆ ಹಾಕಿ ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ ಅವರ ಕಣ್ಣಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು