ಯೋಹಾನ 20:15 - ಕನ್ನಡ ಸತ್ಯವೇದವು J.V. (BSI)15 ಯೇಸು ಆಕೆಯನ್ನು - ಅಮ್ಮಾ, ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ? ಎಂದು ಕೇಳಲು ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ - ಅಯ್ಯಾ, ನೀನು ಆತನನ್ನು ಎತ್ತಿಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ನನಗೆ ಹೇಳು; ನಾನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು. ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೇಸು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ? ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಲು, ಆಕೆಯು ಅವರು ತೋಟಗಾರನೆಂದು ನೆನಸಿ ಅವರಿಗೆ, “ಅಯ್ಯಾ, ನೀನು ಅವರನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಅವರನ್ನು ತೆಗೆದುಕೊಂಡು ಹೋಗುತ್ತೇನೆ,” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಜೆಜುನ್ ತಿಕಾ, “ಬಾಯಿ, ತಿಯಾ ಕಶ್ಯಾಕ್ ರಡುಲಾಲೆ?” ಮಟ್ಲ್ಯಾನ್, ಅನಿ “ತಿಯಾ ಕೊನಾಕ್ ಹುಡ್ಕುಲೆ?” ಮನುನ್ ಇಚಾರ್‍ಲ್ಯಾನ್. ತೆನಿ ತೊ ತ್ಯಾ ಮಳ್ಯಾತ್ಲೊ ಕೊನ್ತರ್ ಅಶಿಲ್ ಮನುನ್ ಚಿಂತ್ಲಿನ್ ಅನಿ ತೆಕಾ, “ಸಾಯ್ಬಾ, ತಿಯಾ ತೆಕಾ ಘೆವ್ನ್ ಗೆಲೆ ಜಾಲ್ಯಾರ್, ತೆಕಾ ತಿಯಾ ಖೈ ಥವ್ಲೆ ಮನುನ್ ಮಾಕಾ ಸಾಂಗ್, ಮಿಯಾ ಜಾವ್ನ್ ತೆಕಾ ಘೆವ್ನ್ ಯೆತಾ” ಮಟ್ಲಿನ್. ಅಧ್ಯಾಯವನ್ನು ನೋಡಿ |