Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:20 - ಕನ್ನಡ ಸತ್ಯವೇದವು J.V. (BSI)

20 ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಶಿಷ್ಯರು ಸ್ವಾವಿುಯನ್ನು ನೋಡಿದ್ದರಿಂದ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸು ಹೀಗೆ ಹೇಳಿದ ಮೇಲೆ, ತನ್ನ ಕೈಗಳನ್ನು ಮತ್ತು ಪಕ್ಕೆಯನ್ನು ಅವರಿಗೆ ತೋರಿಸಿದನು. ಪ್ರಭುವನ್ನು ಕಂಡು ಶಿಷ್ಯರಿಗೆ ಬಹು ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದನ್ನು ಹೇಳಿದ ಮೇಲೆ ತಮ್ಮ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದರು. ಆಗ ಶಿಷ್ಯರು ಕರ್ತನನ್ನು ಕಂಡು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಹೆ ಸಾಂಗುನ್ ಹೊಲ್ಲ್ಯಾ ಮಾನಾ ತೆನಿ ಅಪ್ನಾಚಿ ಹಾತಾ, ಅನಿ ಪಕ್ಡಿತ್ ತೆಂಕಾ ದಾಕ್ವುಲ್ಯಾನ್ ಧನಿಯಾಕ್ ಬಗುನ್ ಶಿಸಾಕ್ನಿ ಲೈ ಕುಶಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:20
9 ತಿಳಿವುಗಳ ಹೋಲಿಕೆ  

ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ.


ನಾವು ನಿಮಗೆ ಪ್ರಸಿದ್ಧಿಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನಸ್ಸಿಟ್ಟು ನೋಡಿ ಕೈಯಿಂದ ಮುಟ್ಟಿದ್ದೇವೆ.


ಆಮೇಲೆ ತೋಮನಿಗೆ - ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು; ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬದವನಾಗಿರಬೇಡ, ನಂಬುವವನಾಗು ಎಂದು ಹೇಳಿದನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ, ಆದರೆ ಲೋಕವು ಸಂತೋಷಿಸುವದು; ನಿಮಗೆ ದುಃಖವಾಗುವದು, ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವದು.


ಆದರೂ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ತಿವಿದ ಕೂಡಲೆ ರಕ್ತವೂ ನೀರೂ ಹೊರಟಿತು.


ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕೆ ಓಡಿಹೋದರು.


ಆದದರಿಂದ ಉಳಿದ ಶಿಷ್ಯರು - ನಾವು ಸ್ವಾವಿುಯನ್ನು ನೋಡಿದ್ದೇವೆ ಎಂದು ಅವನಿಗೆ ಹೇಳಿದರು. ಅದಕ್ಕೆ ಅವನು - ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಿಮ್ಮ ಮಾತನ್ನು ನಂಬುವದೇ ಇಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು