ಯೋಹಾನ 20:25 - ಕನ್ನಡ ಸತ್ಯವೇದವು J.V. (BSI)25 ಆದದರಿಂದ ಉಳಿದ ಶಿಷ್ಯರು - ನಾವು ಸ್ವಾವಿುಯನ್ನು ನೋಡಿದ್ದೇವೆ ಎಂದು ಅವನಿಗೆ ಹೇಳಿದರು. ಅದಕ್ಕೆ ಅವನು - ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಿಮ್ಮ ಮಾತನ್ನು ನಂಬುವದೇ ಇಲ್ಲ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಉಳಿದ ಶಿಷ್ಯರು ತೋಮನಿಗೆ, “ನಾವು ಪ್ರಭುವನ್ನು ನೋಡಿದೆವು” ಎಂದು ಹೇಳಿದರು. ಆದರೆ ತೋಮನು, “ಆತನ ಕೈಗಳಲ್ಲಿರುವ ಮೊಳೆಯ ಗಾಯದ ಗುರುತುಗಳನ್ನು ನಾನು ನೋಡುವವರೆಗೆ, ಮೊಳೆಗಳನ್ನು ಜಡಿದಿದ್ದ ಸ್ಥಳದಲ್ಲಿ ನನ್ನ ಬೆರಳನ್ನಿಡುವವರೆಗೆ ಮತ್ತು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟುನೋಡುವವರೆಗೆ ನಾನು ಅದನ್ನು ನಂಬುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ಕಂಡಿದ್ದೇವೆ,” ಎಂದು ಹೇಳಿದರು. ಆದರೆ ಅವನು ಅವರಿಗೆ, “ನಾನು ಅವರ ಕೈಗಳಲ್ಲಿ ಮೊಳೆಗಳ ಗುರುತನ್ನು ಕಂಡು, ಅದರಲ್ಲಿ ನನ್ನ ಬೆರಳನ್ನು ಇಟ್ಟು ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಂಬುವುದೇ ಇಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಸೆಮನುನ್ ಹುರಲ್ಲ್ಯಾ ಶಿಸಾನಿ ತೆಕಾ,“ಅಮಿ ಧನಿಯಾಕ್ ಬಗಟ್ಲಾವ್” ಮನುನ್ ಸಾಂಗಟ್ಲ್ಯಾನಿ. ತನ್ನಾ ಥೊಮಸಾನ್,“ಮಿಯಾ ತ್ಯೆಚ್ಯಾ ಹಾತಾಂಚ್ಯಾ ವರ್ತಿ ಹೊತ್ತಿ ಮೊಳ್ಯಾಂಚಿ ವಳಕ್ ಬಗಟ್ಲ್ಯಾ ಶಿವಾಯ್ ಅನಿ ತ್ಯಾ ಮೊಳ್ಯಾಂಚ್ಯಾ ವಳ್ಕಿಯಾತ್ನಿ ಬೊಟ್ ಘಾಲುನ್ ಅನಿ ತ್ಯೆಚ್ಯಾ ಪಕ್ಡಿತ್ ಹಾತ್ ಘಾಲುನ್ ಬಗಟ್ಲ್ಯಾ ಶಿವಾಯ್ ವಿಶ್ವಾಸ್, ಕರಿನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |