Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:26 - ಕನ್ನಡ ಸತ್ಯವೇದವು J.V. (BSI)

26 ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ತಿರಿಗಿ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಎಕ್ ವಾರಾಚ್ಯಾ ಮಾನಾ ಶಿಸಾ ದಾರಾ ಲಾವುನ್ ಘೆವ್ನ್ ಭುತ್ತುರ್ ಗೊಳಾ ಹೊವ್ನ್ ಹೊತ್ತಿ, ಅನಿ ಥೊಮಸ್‍ಬಿ ತೆಂಚ್ಯಾ ವಾಂಗ್ಡಾ ಹೊತ್ತೊ. ದಾರಾ ಧಾಪಲ್ಲಿ ಹೊತ್ತಿ ಜಾಲ್ಯಾರ್‍ಬಿ ಜೆಜು ತೆಂಚ್ಯಾ ಮದ್ದಿ ಯೆವ್ನ್ ಇಬೆ ರ್‍ಹಾಲೊ, ಅನಿ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:26
14 ತಿಳಿವುಗಳ ಹೋಲಿಕೆ  

ಅದೇ ದಿವಸದ ಅಂದರೆ ವಾರದ ಮೊದಲನೆಯ ದಿವಸದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಲುಗಳನ್ನು ಮುಚ್ಚಿಕೊಂಡಿರಲು ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.


ಯೇಸು ಅವರಿಗೆ - ನಿಮಗೆ ಸಮಾಧಾನವಾಗಲಿ ಎಂದು ತಿರಿಗಿ ಹೇಳಿ - ತಂದೆ ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ ಅಂದನು.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿವಸಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರಕೊಂಡು ಪ್ರಾರ್ಥನೆಮಾಡುವದಕ್ಕೆ ಬೆಟ್ಟವನ್ನು ಹತ್ತಿದನು.


ಆರು ದಿವಸಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಇವನ ತಮ್ಮನಾದ ಯೋಹಾನನನ್ನೂ ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ನಾವು ನಡಿಸಿದ್ದೆಲ್ಲವೂ ನೀನು ನಮಗೋಸ್ಕರ ನಡಿಸಿದ್ದೇ ಸರಿ.


ಬೇಡವಾದರೆ ಆ ಶತ್ರುಗಳು ನನ್ನ ಬಲವನ್ನು ಶರಣುಹೊಂದಲಿ, ನನ್ನ ಸಂಗಡ ಸಮಾಧಾನಕ್ಕೆ ಬರಲಿ, ನನ್ನೊಡನೆ ಸಂಧಿಮಾಡಿಕೊಳ್ಳಲಿ.


ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಅವರು ಈ ಸಂಗತಿಯನ್ನು ಕುರಿತು ಮಾತಾಡುತ್ತಿರುವಾಗ ಆತನೇ ಅವರ ನಡುವೆ ನಿಂತು [- ನಿಮಗೆ ಮನಶ್ಶಾಂತಿಯಾಗಲಿ ಎಂದು ಅವರಿಗೆ ಹೇಳಿದನು].


ಆಗ ದಿದುಮನೆಂಬ ತೋಮನು ಜೊತೇ ಶಿಷ್ಯರಿಗೆ - ನಾವು ಸಹ ಹೋಗಿ ಆತನೊಡನೆ ಸಾಯೋಣ ಎಂದು ಹೇಳಿದನು.


ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತಿರಿಗಿ ತನ್ನನ್ನು ತೋರಿಸಿಕೊಂಡನು.


ಯೇಸು ಸತ್ತು ಜೀವದಿಂದೆದ್ದ ಮೇಲೆ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ಆತನು ಬಾಧೆಪಟ್ಟು ಸತ್ತ ಮೇಲೆ ತನ್ನನ್ನು ಜೀವಂತನೆಂದು ಅನೇಕ ಪ್ರಮಾಣಗಳಿಂದ ಅಪೊಸ್ತಲರಿಗೆ ತೋರಿಸಿಕೊಂಡನು. ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವಾದ ಸಂಗತಿಗಳನ್ನು ಹೇಳುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು