Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:31 - ಕನ್ನಡ ಸತ್ಯವೇದವು J.V. (BSI)

31 ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಖರೆ ಹೆ ಲಿವಲ್ಲೆ ಎವ್ಡೆ ತುಮಿ ಜೆಜು ಮೆಸ್ಸಿಯಾ, ದೆವಾಚೊಲೆಕ್ ಮನುನ್ ವಿಶ್ವಾಸ್ ಕರುಚೆ, ಅನಿ ತುಮಿ ತ್ಯೆಚ್ಯಾ ವರ್ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಜಿವ್ ಖಮ್ವುನ್ ಘೆವ್ಸಾಟ್ನಿ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:31
36 ತಿಳಿವುಗಳ ಹೋಲಿಕೆ  

ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಯೇಸು ದೇವರ ಮಗನಾಗಿದ್ದಾನೆಂದು ಯಾವನು ಒಪ್ಪಿಕೊಂಡು ಹೇಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು.


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರವಿುಸಿ ಮುಂದಕ್ಕೆ ಹೋಗುವವನಿಗೆ ದೇವರ ಅನ್ಯೋನ್ಯತೆಯಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಉಂಟು.


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ, ಅವನ ಸಾಕ್ಷಿ ಸತ್ಯವೇ; ತಾನು ಹೇಳುವದು ಸತ್ಯವೆಂದು ಅವನು ಬಲ್ಲನು; ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.


ತೋಮನು ಆತನಿಗೆ - ನನ್ನ ಸ್ವಾಮೀ, ನನ್ನ ದೇವರು! ಎಂದು ಹೇಳಿದನು.


ಕಳ್ಳನು ಕದ್ದುಕೊಳ್ಳುವದಕ್ಕೂ ಕೊಯ್ಯುವದಕ್ಕೂ ಹಾಳುಮಾಡುವದಕ್ಕೂ ಬರುತ್ತಾನೆ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ನಿನಗೆ ಉಪದೇಶಿಸಿರುವ ವಿಷಯಗಳು ಯಥಾರ್ಥವಾದವುಗಳೆಂದು ಇದರಿಂದ ನೀನು ಗೊತ್ತುಮಾಡಿಕೊಳ್ಳಬಹುದು.


ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು - ನಿಜವಾಗಿ ಈತನು ದೇವಕುಮಾರನಾಗಿದ್ದನು ಅಂದರು.


ಮುಂದೆ ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದು ತಡಮಾಡದೆ ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವದಕ್ಕೆ ಪ್ರಾರಂಭಮಾಡಿದನು.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು;


ನೀವು ನೋಡುವಂಥ ನಿಮಗೆ ಗುರುತಿರುವಂಥ ಈ ಮನುಷ್ಯನು ನೆಟ್ಟಗಾದದ್ದಕ್ಕೆ ಆತನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಪೂರ್ಣಕ್ಷೇಮವನ್ನು ಕೊಟ್ಟಿತು.


ಅದಕ್ಕೆ ನತಾನಯೇಲನು - ಗುರುವೇ, ನೀನು ದೇವಕುಮಾರನು ಸರಿ; ನೀನೇ ಇಸ್ರಾಯೇಲಿನ ಅರಸನು ಅಂದನು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ.


ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -


ಆಗ ಆ ಶೋಧಕನು ಆತನ ಬಳಿಗೆ ಬಂದು - ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಎಂದು ಹೇಳಲು ಆತನು -


ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು