Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:8 - ಕನ್ನಡ ಸತ್ಯವೇದವು J.V. (BSI)

8 ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಕ್ಕೆ ಹೋಗಿ ನೋಡಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಆ ಮತ್ತೊಬ್ಬ ಶಿಷ್ಯನು ಒಳಗೆ ಹೋದನು. ಸಮಾಧಿಯನ್ನು ಮೊದಲು ತಲುಪಿದವನೇ ಆ ಶಿಷ್ಯನು. ಅವನು ಸಂಭವಿಸಿರುವುದನ್ನು ಕಂಡು ನಂಬಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಮೊದಲು ಸಮಾಧಿಗೆ ಬಂದಿದ್ದ ಆ ಇನ್ನೊಬ್ಬ ಶಿಷ್ಯನು ಸಹ ಪ್ರವೇಶಿಸಿ, ಕಂಡು ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ತೊ ಅದ್ದಿ ಸಮಾದಿಕ್ಡೆ ಜಾವ್ನ್ ಪಾವಲ್ಲೊ ಅನಿ ಎಕ್ಲೊ ಶಿಸ್‍ಬಿ ಭುತ್ತುರ್ ಗೆಲೊ. ತೆನಿ ಹೆ ಸಗ್ಳೆ ಬಗಟ್ಲ್ಯಾನ್ ಅನಿ ವಿಶ್ವಾಸ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:8
5 ತಿಳಿವುಗಳ ಹೋಲಿಕೆ  

ಆದದರಿಂದ ಉಳಿದ ಶಿಷ್ಯರು - ನಾವು ಸ್ವಾವಿುಯನ್ನು ನೋಡಿದ್ದೇವೆ ಎಂದು ಅವನಿಗೆ ಹೇಳಿದರು. ಅದಕ್ಕೆ ಅವನು - ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಿಮ್ಮ ಮಾತನ್ನು ನಂಬುವದೇ ಇಲ್ಲ ಅಂದನು.


ಆದರೆ ಆ ಮತ್ತೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲೇ ಸಮಾಧಿಗೆ ಮುಟ್ಟಿ


ಯೇಸು ಅವನಿಗೆ - ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಎಂದು ಹೇಳಿದನು.


ಅದಕ್ಕೆ ಯೇಸು - ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರದಿಂದ ನಂಬುತ್ತೀಯೋ? ಇದಕ್ಕಿಂತ ಹೆಚ್ಚಿನ ಕಾರ್ಯಗಳನ್ನು ನೋಡುವಿ ಅಂದನು.


ಅಬ್ರಹಾಮನು ಅವನಿಗೆ - ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವದಿಲ್ಲ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು