Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:1 - ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತಿರಿಗಿ ತನ್ನನ್ನು ತೋರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಯೇಸು ಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ, ಯೇಸು ತನ್ನ ಶಿಷ್ಯರಿಗೆ ತಿಬೇರಿಯ (ಗಲಿಲಾಯ) ಸರೋವರದ ಬಳಿ ಕಾಣಿಸಿಕೊಂಡನು. ಅದು ಹೀಗೆ ನಡೆಯಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಶಿಷ್ಯರಿಗೆ ತಮ್ಮನ್ನು ಪುನಃ ತೋರಿಸಿಕೊಂಡರು. ಅವರು ಈ ರೀತಿಯಾಗಿ ಕಾಣಿಸಿಕೊಂಡರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆಚ್ಯಾ ಮಾನಾ ಜೆಜು ತಿಬೆರಿಯಸ್ ಮನ್ತಲ್ಯಾ ಸಮುಂದರಾತ್ ಅನಿ ಎಗ್ದಾ ಶಿಸಾಕ್ನಿ ದಿಸ್ತಾ ತೆ ಅಶೆ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:1
11 ತಿಳಿವುಗಳ ಹೋಲಿಕೆ  

ತರುವಾಯ ಯೇಸು ಗಲಿಲಾಯದ ಸಮುದ್ರದ ಆಚೆಗೆ ಹೋದನು; ಅದಕ್ಕೆ ತಿಬೇರಿಯದ ಸಮುದ್ರವೆಂತಲೂ ಹೇಳುತ್ತಾರೆ.


ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು.


ಬಳಿಕ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ ಯೇಸು ತಮಗೆ ಗೊತ್ತು ಮಾಡಿದ್ದ ಬೆಟ್ಟಕ್ಕೆ ಸೇರಿದರು.


ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.


ಆದರೆ ನಾನು ಜೀವಿತನಾಗಿ ಎದ್ದ ಮೇಲೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುವೆನು ಎಂದು ಹೇಳಿದನು.


ಯೇಸು ಸತ್ತು ಜೀವದಿಂದೆದ್ದ ಮೇಲೆ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಒಂದು ಹಳ್ಳಿಗೆ ನಡಕೊಂಡು ಹೋಗುತ್ತಿದ್ದಾಗ ಆತನು ಅವರಿಗೆ ರೂಪಾಂತರದಿಂದ ಕಾಣಿಸಿಕೊಂಡನು.


ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ - ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ ಎಂದು ಹೇಳಿದನು.


ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಆತನು ಬಾಧೆಪಟ್ಟು ಸತ್ತ ಮೇಲೆ ತನ್ನನ್ನು ಜೀವಂತನೆಂದು ಅನೇಕ ಪ್ರಮಾಣಗಳಿಂದ ಅಪೊಸ್ತಲರಿಗೆ ತೋರಿಸಿಕೊಂಡನು. ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವಾದ ಸಂಗತಿಗಳನ್ನು ಹೇಳುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು