Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:17 - ಕನ್ನಡ ಸತ್ಯವೇದವು J.V. (BSI)

17 ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಿನ್ವೆಪಟಿ ಜೆಜುನ್, “ಸಿಮಾವ್ ಜುವಾಂವಾಚ್ಯಾ ಲೆಕಾ, ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ಜೆಜುನ್ ತಿನ್ವೆಪಟಿ “ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮನುನ್ ಇಚಾರ್‍ತಾನಾ ಪೆದ್ರುಕ್ ಜೆಜಾರ್ ದಿಸ್ಲೊ, ಅನಿ ತೆನಿ “ಧನಿಯಾ ತುಕಾ ಸಗ್ಳೆ ಗೊತ್ತ್ ಹಾಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್!” ಮನುನ್ ಮಟ್ಲ್ಯಾನ್ ಜೆಜುನ್ ತೆಕಾ,“ಮಾಜ್ಯಾ ಬಕ್ರ್ಯಾಕ್ನಿ ಚಾರ್‍ವು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:17
40 ತಿಳಿವುಗಳ ಹೋಲಿಕೆ  

ಯೇಸು - ನನಗಾಗಿ ಪ್ರಾಣ ಕೊಟ್ಟೀಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನ ವಿಷಯದಲ್ಲಿ ಅವನನ್ನು ಅರಿಯೆನೆಂದು ಮೂರು ಸಾರಿ ಹೇಳುವ ತನಕ ಕೋಳಿ ಕೂಗುವದೇ ಇಲ್ಲ ಅಂದನು.


ಆಗ ಪೇತ್ರನು - ಕೋಳಿ ಎರಡು ಸಾರಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಂಡು ಆ ವಿಷಯದಲ್ಲಿ ಯೋಚಿಸಿ ಅತ್ತನು.


ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರನ್ನು ತನ್ನ ಜನರೆಂದು ಸಾಕ್ಷಿಕೊಟ್ಟನು.


ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.


ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ.


ನೀವು ಸದ್ಯಕ್ಕೆ ಸ್ವಲ್ಪಕಾಲ ದೇವರ ಚಿತ್ತಾನುಸಾರ ನಾನಾ ಕಷ್ಟಗಳಲ್ಲಿದ್ದು ದುಃಖಿಸುವವರಾಗಿದ್ದರೂ ಆ ಪದವಿಯನ್ನು ಆಲೋಚಿಸಿ ಹರ್ಷಿಸುವವರಾಗಿದ್ದೀರಿ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಮತ್ತೀಯನನ್ನೂ ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ - ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವದರಿಂದ ಆ ಸ್ಥಾನವನ್ನು ಹೊಂದುವದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿಕೊಂಡವನನ್ನು ತೋರಿಸಿಕೊಡು ಎಂದು ಹೇಳಿದರು.


ಅದಕ್ಕೆ ಪೇತ್ರನು ತಿರಿಗಿ ಅಲ್ಲ ಅಂದನು. ಕೂಡಲೆ ಕೋಳಿ ಕೂಗಿತು.


ಆಗ ಯೇಸು ತನ್ನ ಮೇಲೆ ಬರುವದನ್ನೆಲ್ಲಾ ತಿಳಿದು ಹೊರಗೆ ಹೋಗಿ - ನೀವು ಯಾರನ್ನು ಹುಡುಕುತ್ತೀರಿ ಎಂದು ಅವರನ್ನು ಕೇಳಿದನು.


ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ, ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ನರಜನ್ಮದವರನ್ನು ಬಾಧಿಸಿ ವ್ಯಥೆಗೊಳಿಸುವದು ಆತನಿಗೆ ಇಷ್ಟವಿಲ್ಲ.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ಆಗ ಆ ಸ್ತ್ರೀಯು ಎಲೀಯನಿಗೆ - ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು [ದೇವರ] ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವದಕ್ಕೆ ಬಂದಿಯೋ ಎನ್ನಲು ಅವನು ಆಕೆಗೆ -


ಇದಕ್ಕೆ ಸಾಕ್ಷಿ; ದೇವದೇವನಾದ ಯೆಹೋವನಿಗೆ ಇದು ಗೊತ್ತುಂಟು. ಇಸ್ರಾಯೇಲ್ಯರಿಗೂ ಗೊತ್ತಾಗುವದು. ನಾವು ದ್ರೋಹಿಗಳೂ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರೂ ಆಗಿದ್ದರೆ ಆತನು ನಮ್ಮನ್ನು ಈ ಹೊತ್ತೇ ಕೈಬಿಡಲಿ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಕರ್ತನೇ, ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ; ನಾನು ಇನ್ನೇನು ಹೇಳಲಿ?


ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯೌವನಸ್ಥನಾಗಿದ್ದಾಗ ನೀನೇ ನಡುವನ್ನು ಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿಕೊಂಡು ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂಡು ಹೋಗುವನು ಎಂದು ಹೇಳಿದನು.


ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ; ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು.


ಯೇಸು ಅವಳಿಗೆ - ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರಕೊಂಡು ಬಾ ಎಂದು ಹೇಳಿದನು.


ಹೀಗೆ ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು