Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:25 - ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಯೇಸು ಮಾಡಿದ್ದು ಇನ್ನೂ ಬಹಳವಿದೆ; ಅದನ್ನೆಲ್ಲಾ ಒಂದೊಂದಾಗಿ ಬರೆಯುವದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸದೆ ಹೋದೀತೆಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶಃ ಲೋಕವೇ ಹಿಡಿಸಲಾರದೆಂದು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವುಗಳಲ್ಲಿ ಪ್ರತಿಯೊಂದನ್ನೂ ಬರೆಯುವುದಾದರೆ, ಬರೆಯಲ್ಪಡುವ ಪುಸ್ತಕಗಳನ್ನು ಇಡೀ ಪ್ರಪಂಚವೇ ಹಿಡಿಸಲಾರದೆಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆಜುನ್ ಕರಲ್ಲಿ ಕಾಮಾ, ಅನಿ ಲೈ ಹಾತ್ ತಿ ಸಗ್ಳಿ ಎಕಾಚ್ಯಾ ಮಾನಾ ಎಕ್ ಲಿವ್ಲ್ಯಾರ್, ತಿ ಲಿವ್‍ಸಾಟಿ ಪಾಜೆ ಹೊಲ್ಲಿ ಪುಸ್ತಕಾ ಹ್ಯಾ ಜಗಾಕುಚ್ ಅಟ್ಪಿನಸಿ ಹೊತ್ತಿ ಕಾಯ್ಕಿ ಮನುನ್ ಮಾಕಾ ದಿಸ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:25
12 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯವು; ಅವು ಅಸಂಖ್ಯಾತವಾಗಿವೆ.


ನನ್ನ ಬಾಯಿ ನಿನ್ನ ನೀತಿಯನ್ನೂ ರಕ್ಷಣೆಯನ್ನೂ ಹಗಲೆಲ್ಲಾ ವರ್ಣಿಸುತ್ತಿರುವದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.


ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?


ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ಕಂದಾ, ಇವಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು; ಬಹುಗ್ರಂಥಗಳ ರಚನೆಗೆ ವಿುತಿಯಿಲ್ಲ; ಅತಿ ವ್ಯಾಸಂಗವು ದೇಹಕ್ಕೆ ಆಯಾಸ.


ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ - ಆಮೋಸನು ಇಸ್ರಾಯೇಲ್ಯರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚುಮಾಡಿದ್ದಾನೆ; ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು;


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಎಂದು ನಿಮಗೆ ತಿರಿಗಿ ಹೇಳುತ್ತೇನೆ ಅಂದನು.


ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದಿದ್ದವನಿಗೆ ಹೀಗೆ ಹೀಗಾಯಿತೆಂಬದನ್ನೂ ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು