Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:10 - ಕನ್ನಡ ಸತ್ಯವೇದವು J.V. (BSI)

10 ಯೇಸು ಅವನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ ಜನಕ್ಕೆ ಬೋಧಕನಾಗಿರುವ ನಿನಗೆ ಇದು ತಿಳಿಯುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಯೇಸು, “ಇಸ್ರಯೇಲಿನ ಹೆಸರಾಂತ ಬೋಧಕನಾದ ನಿನಗೇ ಇದು ಅರ್ಥವಾಗಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಅವನಿಗೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಇವುಗಳು ತಿಳಿಯುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜುನ್ ತೆಕಾ,“ತಿಯಾ ಇಸ್ರಾಯೆಲಾತ್ ಎಕ್ ಮೊಟೊ ಶಿಕ್ವುನಾರೊ ಮಾನುಸ್, ಹೆ ತುಕಾ ಗೊತ್ತ್, ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:10
28 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು ಉತ್ತರವಾಗಿ ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದೆ ತಪ್ಪುವವರಾಗಿದ್ದೀರಿ;


ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ಈ ಜನರನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರಷ್ಟೆ; ನಡಿಸಲ್ಪಟ್ಟವರೂ ನಾಶವಾಗುತ್ತಾರೆ.


ದೇವರು ನಿರ್ಮಲಚಿತ್ತರಾದ ಇಸ್ರಾಯೇಲ್ಯರಿಗೆ ದಯಾಪರನೇ ಹೌದು.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೇ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ಆದದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಸ್ವಭಾವವನ್ನು ಬಿಟ್ಟುಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.


ಆತನು ಎಲ್ಲಾ ದೊರೆತನಗಳಿಗೂ ಅಧಿಕಾರಿಗಳಿಗೂ ಶಿರಸ್ಸು. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದಿರಿ; ಈ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಇದು ಪಾಪಾಧೀನಸ್ವಭಾವವನ್ನು ವಿಸರ್ಜಿಸುವದೇ; ಇದೇ ಕ್ರಿಸ್ತೀಯ ಸುನ್ನತಿ;


ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.


ಒಂದಾನೊಂದು ದಿನದಲ್ಲಿ ಆತನು ಉಪದೇಶ ಮಾಡುತ್ತಿರಲು ಗಲಿಲಾಯ ಯೂದಾಯಗಳ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇವಿುನಿಂದಲೂ ಬಂದಿದ್ದ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಆತನ ಹತ್ತಿರ ಕೂತುಕೊಂಡಿದ್ದರು. ಗುಣಮಾಡುವದಕ್ಕೆ ಕರ್ತನ ಶಕ್ತಿಯು ಆತನಲ್ಲಿತ್ತು.


ಅದಕ್ಕೆ ನಿಕೊದೇಮನು - ಇದು ಆಗುವದು ಹೇಗೆ? ಅಂದಾಗ


ಆದರೆ ಎಲ್ಲಾ ಜನರಿಂದ ಮಾನಹೊಂದಿದ ನ್ಯಾಯಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟು ಸಭೆಯವರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು