Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:15 - ಕನ್ನಡ ಸತ್ಯವೇದವು J.V. (BSI)

15 ಮನುಷ್ಯಕುಮಾರನು ತನ್ನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಎತ್ತರದಲ್ಲಿಡಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಹೊಂದಿಕೊಳ್ಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ಮನುಷ್ಯಪುತ್ರನಾದ ನನ್ನನ್ನು ನಂಬುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆಚೆಸಾಟ್ನಿ ತೆಚ್ಯಾ ವರ್ತಿ ವಿಶ್ವಾಸ್ ಕರಲ್ಲ್ಯಾ ಹರಿ ಎಕ್ಲ್ಯಾಕ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:15
37 ತಿಳಿವುಗಳ ಹೋಲಿಕೆ  

ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.


ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.


ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.


ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.


ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು;


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವದಾದರೆ ನಾಶನಮಾರ್ಗದಲ್ಲಿರುವವರಿಗೇ ಮರೆಯಾಗಿರುವದು.


ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ.


ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.


ಎಲೈ ತಿರಸ್ಕಾರಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದು ಎಂದು ಹೇಳಿದನು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಆದಕಾರಣ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು