Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:16 - ಕನ್ನಡ ಸತ್ಯವೇದವು J.V. (BSI)

16 ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ದೆವಾನ್ ಹ್ಯಾ ಜಗಾಚೊ ಕವ್ಡೊ ಪ್ರೆಮ್ ಕರ್ಲ್ಯಾನ್ ಕಾಯ್ ಮಟ್ಲ್ಯಾರ್ ಅಪ್ನಾಚ್ಯಾ ಎಕ್ಲ್ಯಾಚ್ ಎಕ್ಲ್ಯಾ ಲೆಕಾಕ್ ತೆನಿ ಜಗಾಸಾಟ್ನಿ ದಿಲ್ಯಾನ್. ಅನಿ ತ್ಯೆಚ್ಯಾ ವರ್ತಿ ವಿಶ್ವಾಸ್ ಕರಲ್ಲೆ ಕೊನ್ಬಿ ನಾಸ್ ಹೊವ್ಚೆ ನ್ಹಯ್, ತೆಂಕಾ ಕನ್ನಾಬಿ ಮರಾನ್ ನಸಲ್ಲೆ ಜಿವನ್ ಗಾವುಚೆ ಮನುನ್ ತೆನಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:16
28 ತಿಳಿವುಗಳ ಹೋಲಿಕೆ  

ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.


ಮನುಷ್ಯಕುಮಾರನು ತನ್ನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಎತ್ತರದಲ್ಲಿಡಲ್ಪಡಬೇಕು.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದ ನಾವು ಪ್ರೀತಿಸುತ್ತೇವೆ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.


ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು


ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.


ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಜನೋಪಕಾರವೂ ಪ್ರತ್ಯಕ್ಷವಾದಾಗ


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ಅವನಿಗೆ ಇನ್ನೂ ಒಬ್ಬನಿದ್ದನು; ಯಾರಂದರೆ ಅವನ ಮುದ್ದು ಮಗನೇ. ನನ್ನ ಮಗನಿಗಾದರೂ ಮರ್ಯಾದೆ ತೋರಿಸಿಯಾರೆಂದು ಧಣಿಯು ಕಡೆಯಲ್ಲಿ ಅವನನ್ನು ಅವರ ಬಳಿಗೆ ಕಳುಹಿಸಿದನು.


ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ಆಗಲಾತನು - ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು ಅಂದನು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, ಅದು ಆತನನ್ನು ತಿಳಿದುಕೊಳ್ಳಲಿಲ್ಲವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು