Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:20 - ಕನ್ನಡ ಸತ್ಯವೇದವು J.V. (BSI)

20 ಕೆಟ್ಟದ್ದನ್ನು ಮಾಡುವವರು ಬೆಳಕನ್ನು ಸಹಿಸುವದಿಲ್ಲ, ತಮ್ಮ ಕೃತ್ಯಗಳು ದುಷ್ಕೃತ್ಯಗಳಾಗಿ ತೋರಿಬಂದಾವೆಂದು ಬೆಳಕಿಗೆ ಬರುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕೇಡನ್ನು ಮಾಡುವವರು ಬೆಳಕನ್ನು ದ್ವೇಷಿಸುತ್ತಾರೆ ಮತ್ತು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವರು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆ ಕೊನ್ ಬುರ್ಶಿ ಕಾಮಾ ಕರ್‍ತಾತ್, ತೆನಿ ಉಜ್ವೊಡಾಕ್ ಯೆಯ್ನಾತ್, ತೆನಿ ಉಜ್ವೊಡಾಕ್ ಧುರ್ ಕರ್‍ತಾತ್. ಕಶ್ಯಾಕ್ ಮಟ್ಲ್ಯಾರ್ ತೆಂಚಿ ಬುರ್ಶಿ ಕಾಮಾ ದಾಕ್ವುನ್ ದಿತಲೆ ತೆಂಕಾ ಮನ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:20
18 ತಿಳಿವುಗಳ ಹೋಲಿಕೆ  

ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಯಾಕಂದರೆ ಯೆಹೋವನ ಭಯಭಕ್ತಿಗೆ ಮನಸ್ಸಿಲ್ಲದೆ ತಿಳುವಳಿಕೆಯನ್ನು ಹಗೆಮಾಡಿದರು.


ನೀವೋ ನನ್ನ ಸುಶಿಕ್ಷಣವನ್ನು ಹಗೆ ಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು.


ಧರ್ಮನಿಂದಕನು ಗದರಿಕೆಯನ್ನೊಲ್ಲನು; ಜ್ಞಾನಿಗಳ ಸಂಗಡ ಸೇರನು.


ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,


ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಆತನಿಗೆ - ಬೋಧಕನೇ, ಈ ಮಾತುಗಳನ್ನು ಹೇಳುವದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು ಎಂದು ಹೇಳಲು


ಅವರಾದರೋ ಕತ್ತಲ ಹಾದಿಗಳನ್ನು ಹಿಡಿಯಬೇಕೆಂದು ಧರ್ಮಮಾರ್ಗಗಳನ್ನು ತೊರೆದುಬಿಡುವರು;


ನಿಮ್ಮ ನಿವಾಸವು ಮೋಸದೊಳಗೇ ಇದೆ; ಅಯ್ಯೋ, ಮೋಸಗಾರರಾಗಿರುವದರಿಂದ ನನ್ನನ್ನು ಅರಿಯಲೊಲ್ಲರು ಎಂದು ಯೆಹೋವನು ಅನ್ನುತ್ತಾನೆ.


ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ತನ್ನ ಕೃತ್ಯಗಳನ್ನು ಮಾಡಿದ್ದೇನೆಂದು ತೋರಿಬರುವಂತೆ ಬೆಳಕಿಗೆ ಬರುತ್ತಾನೆ.


ಅನಂತರ ಆಕೆ ಅವುಗಳನ್ನು ಬಾಂಡ್ಲದಿಂದ ತೆಗೆದು ಅವನ ಮುಂದಿಟ್ಟಳು. ಅವನು ಊಟ ಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.


ಮಧ್ಯರಾತ್ರಿಯಲ್ಲಿ ಇವಳೆದ್ದು ನಿನ್ನ ದಾಸಿಯಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಮಗ್ಗುಲಲ್ಲಿಟ್ಟುಕೊಂಡಳು. ಸತ್ತುಹೋದ ತನ್ನ ಮಗುವನ್ನು ನನ್ನ ಮಗ್ಗುಲಲ್ಲಿಟ್ಟಳು.


ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಗಳನ್ನು ಕಲ್ಪಿಸುವನು; ತುಟಿಯನ್ನು ಮಡಸಿಕೊಳ್ಳುವವನು ಕೇಡನ್ನು ಸಾಧಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು