ಯೋಹಾನ 3:23 - ಕನ್ನಡ ಸತ್ಯವೇದವು J.V. (BSI)23 ಯೋಹಾನನೂ ಸಲೀಮೂರಿನ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನಮಾಡಿಸುತ್ತಿದ್ದನು; ಅಲ್ಲಿ ಬಹಳ ನೀರಿತ್ತು; ಜನರು ಬಂದು ಸ್ನಾನಮಾಡಿಸಿಕೊಳ್ಳುತ್ತಾ ಇದ್ದರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೋಹಾನನು ಸಹ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಐನೋನ್ ಎಂಬ ಊರು ಸಲೀಮ್ ಊರಿನ ಸಮೀಪದಲ್ಲಿದೆ. ಅಲ್ಲಿ ಬೇಕಾದಷ್ಟು ನೀರಿದ್ದುದರಿಂದ ಯೋಹಾನನು ಅಲ್ಲಿ ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಜನರು ಅಲ್ಲಿಗೆ ಬಂದು ದೀಕ್ಷಾಸ್ನಾನ ತೆಗೆದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇದಲ್ಲದೆ ಯೋಹಾನನು ಸಹ ಸಲೀಮ್ ಎಂಬ ಊರಿನ ಸಮೀಪದಲ್ಲಿದ್ದ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಏಕೆಂದರೆ ಅಲ್ಲಿ ಬಹಳ ನೀರು ಇತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಸಾಲಿಮ್ ಮನ್ತಲ್ಯಾ ಗಾಂವಾಂಚ್ಯಾ ಎನೊನ್ ಮನ್ತಲ್ಯಾ ಜಾಗ್ಯಾರ್ ಪಾಜೆ ತವ್ಡೆ ಪಾನಿ ಹೊತ್ತೆ, ತಸೆ ಮನುನ್ ಜುವಾಂವ್ ಥೈ ಲೊಕಾಕ್ನಿ ಬಾಲ್ತಿಮ್ ದಿವ್ಕ್ ಲಾಗಲ್ಲೊ, ಲೊಕಾ ಯೆವ್ನ್ ಬಾಲ್ತಿಮ್ ಘೆವ್‍ಲಾಗಲ್ಲಿ. ಅಧ್ಯಾಯವನ್ನು ನೋಡಿ |