Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:26 - ಕನ್ನಡ ಸತ್ಯವೇದವು J.V. (BSI)

26 ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ - ಗುರುವೇ, ಯೊರ್ದನ್‍ಹೊಳೆಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಅವನೂ ಸ್ನಾನ ಮಾಡಿಸುತ್ತಾನೆ, ಅವನ ಬಳಿಗೆ ಎಲ್ಲರು ಹೋಗುತ್ತಾರೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ಯೋಹಾನನ ಬಳಿಗೆ ಬಂದು ಅವನಿಗೆ, “ಗುರುವೇ, ಯೊರ್ದನ್ ನದಿಯ ಆಚೆದಡದಲ್ಲಿ ನಿನ್ನೊಡನೆ ಇದ್ದ ಒಬ್ಬರ ಬಗ್ಗೆ ನೀನು ಸಾಕ್ಷಿ ಕೊಟ್ಟೆಯಲ್ಲಾ. ಇಗೋ, ಅವರು ದೀಕ್ಷಾಸ್ನಾನ ಮಾಡಿಸುತ್ತಿದ್ದಾರೆ ಮತ್ತು ಎಲ್ಲರೂ ಅವರ ಬಳಿಗೆ ಹೋಗುತ್ತಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ತೆನಿ ಜುವಾಂವಾಕ್ಡೆ ಗೆಲ್ಯಾನಿ, ಅನಿ “ಗುರುಜಿ, ತುಕಾ ಯಾದ್ ಹಾಯ್ ಕಾಯ್ ಜೊರ್ದಾನಾಚ್ಯಾ ತಿಕುಲ್ಯಾ ದಿಸ್ ಉಗಾವ್ತಲ್ಯಾ ದಿಕ್ಕಾತ್ ತೊ ಮಾನುಸ್ ತುಕಾ ಯಾದ್ ಹಾಯ್ ಕಾಯ್? ಅನಿ ತ್ಯೆಚ್ಯಾ ವಿಶಯಾತ್ ತಿಯಾ ಸಾಕ್ಷಿ ದಿಲ್ಲೆ ಅನಿ ಸಗ್ಳೆ ಲೊಕಾ ತೆಚೆಕ್ಡೆ ಜಾವ್ಲ್ಯಾತ್!” ತೊ ಅತ್ತಾ ಬಾಲ್ತಿಮ್ ದಿವ್‍ಲಾಲಾ, ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:26
23 ತಿಳಿವುಗಳ ಹೋಲಿಕೆ  

ತನ್ನ ಮೂಲಕವಾಗಿ ಎಲ್ಲರು ನಂಬುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕೆ ಬಂದನು.


ಹೀಗಿರಲಾಗಿ ಫರಿಸಾಯರು - ನಿಮ್ಮ ಯತ್ನವೇನೂ ಸಾಗಲಿಲ್ಲ, ನೋಡಿರಿ; ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು.


ಯೋಹಾನನು ಆತನ ವಿಷಯವಾಗಿ ಸಾಕ್ಷಿಕೊಡುತ್ತಾನೆ; ಹೇಗಂದರೆ - ನನ್ನ ಹಿಂದೆ ಬರುವವನು ನನಗಿಂತ ಮೊದಲೇ ಇದ್ದದರಿಂದ ನನಗೆ ಮುಂದಿನವನಾದನು ಎಂಬದಾಗಿ ನಾನು ಹೇಳಿದವನು ಈತನೇ ಎಂದು ಕೂಗಿ ಹೇಳಿದ್ದಾನೆ.


ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.


ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಜನರಿಂದ ಬೋಧಕರನ್ನಿಸಿಕೊಳ್ಳುವದು, ಇವುಗಳೇ ಅವರಿಗೆ ಇಷ್ಟ.


ಮತ್ತು ಸಮಸ್ತಪ್ರಯಾಸವನ್ನೂ ಕೈಗೂಡುವ ಸಕಲ ಕಾರ್ಯವನ್ನೂ ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರು ನಿನ್ನ ಬಳಿಗೆ ಬರುವರು.


ಆದರೆ ನೀವು ಬೋಧಕರನ್ನಿಸಿಕೊಳ್ಳಬೇಡಿರಿ; ಒಬ್ಬನೇ ನಿಮ್ಮ ಬೋಧಕನು, ನೀವೆಲ್ಲರು ಸಹೋದರರು.


ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ


ಆತನು ಯೂದಾಯವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೋದನು. (ಆದರೂ ಸ್ನಾನ ಮಾಡಿಸುತ್ತಿದ್ದವನು ಯೇಸುವಲ್ಲ; ಆತನ ಶಿಷ್ಯರೇ ಮಾಡಿಸುತ್ತಿದ್ದರು.)


ಅಷ್ಟರೊಳಗೆ ಶಿಷ್ಯರು - ಗುರುವೇ, ಊಟಮಾಡು ಎಂದು ಆತನನ್ನು ಬೇಡಿಕೊಂಡರು.


ನೀವು ಯೋಹಾನನ ಬಳಿಯಲ್ಲಿ ಕೇಳಿಕೊಂಡು ಬರುವದಕ್ಕೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು