Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:28 - ಕನ್ನಡ ಸತ್ಯವೇದವು J.V. (BSI)

28 ನಾನು ಕ್ರಿಸ್ತನಲ್ಲ. ಆತನ ಮುಂದೆ ಕಳುಹಿಸಲ್ಪಟ್ಟವನಾಗಿದ್ದೇನೆ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ‘ನಾನು ಲೋಕೋದ್ಧಾರಕನಲ್ಲ: ಆತನ ಮುಂದೂತ ಮಾತ್ರ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ‘ನಾನು ಕ್ರಿಸ್ತನಲ್ಲ. ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದಕ್ಕಾಗಿ ಮಾತ್ರ ಕಳುಹಿಸಲ್ಪಟ್ಟಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ‘ನಾನು ಕ್ರಿಸ್ತನಲ್ಲ, ಆದರೆ ಅವರ ಮುಂದೂತನೆಂದು,’ ಹೇಳಿದ್ದಕ್ಕೆ ನೀವೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆಂಕಾ ಜುವಾಂವಾಕ್ ಸಾಂಗ್ಲ್ಯಾನ್ ಮಿಯಾ ಮೆಸ್ಸಿಯಾ ನ್ಹಯ್, ಮಾಕಾ ತ್ಯೆಚ್ಯಾನ್ಕಿ ಫಿಡೆ- ಫಿಡೆ ಧಾಡಲ್ಲೆ ಹೊತ್ತೆ ಮನುನ್ ಸಾಂಗ್ಲಾ ಮನ್ತಲ್ಯಾಕ್ ತುಮಿಚ್ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:28
12 ತಿಳಿವುಗಳ ಹೋಲಿಕೆ  

ಅವನು ಮರೆಮಾಜದೆ - ನಾನು ಕ್ರಿಸ್ತನಲ್ಲವೆಂದು ಎಲ್ಲರ ಮುಂದೆ ಹೇಳಿದನು.


ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಯೆಶಾಯಪ್ರವಾದಿಯು ಹೇಳಿದನಷ್ಟೆ; ಆ ಶಬ್ದವೇ ನಾನು ಎಂದು ಉತ್ತರಕೊಟ್ಟನು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.


ನೀನು ಕ್ರಿಸ್ತನೂ ಎಲೀಯನೂ ಆ ಪ್ರವಾದಿಯೂ ಅಲ್ಲವಾದರೆ ಸ್ನಾನಮಾಡಿಸುವದೇನು? ಎಂದು ಅವನನ್ನು ಕೇಳಿದರು.


ಮಗುವೇ, ನೀನಾದರೋ ಪರಾತ್ಪರನ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ


ಆತನೇ ನನ್ನ ಹಿಂದೆ ಬರತಕ್ಕವನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು