Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:3 - ಕನ್ನಡ ಸತ್ಯವೇದವು J.V. (BSI)

3 ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುನ್ ತೆಕಾ, “ಮಿಯಾ ತುಕಾ ಖರೆ ಅಸಲ್ಲೆ ಸಾಂಗ್ತಾ; ಅನಿ ಎಗ್ದಾ ಉಪ್ಜುನ್ ಯೆಲ್ಯಾ ಶಿವಾಯ್ ಕೊನಾಕ್ಬಿ ದೆವಾಚೆ ರಾಜ್ ಬಗುಕ್‍ ಹೊಯ್ನಾ” ಮನುನ್ ಜವಾಬ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:3
32 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ದೇವರಿಂದ ಹುಟ್ಟಿದವನು ಪಾಪಮಾಡನು; ದೇವರ ಜೀವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡುವವನಾಗಿರಲಾರನು.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ಇವರು ರಕ್ತಸಂಬಂಧದಿಂದಾಗಲಿ ಕಾಮದಿಂದಾಗಲಿ ಪುರುಷಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.


ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ


ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು.


ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢಜನರೇ, ಯೆಹೋವನ ಈ ಮಾತನ್ನು ಕೇಳಿರಿ -


ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಕತ್ತಲು ಅದನ್ನು ಮುಸುಕಲಿಲ್ಲ.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ ಅಯ್ಯೋ.


ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ಇದಲ್ಲದೆ ಅವನಿಗೆ - ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರಿಹೋಗುತ್ತಾ ಇಳಿದುಬರುತ್ತಾ ಇರುವದನ್ನೂ ನೋಡುವಿರಿ ಎಂದು ಹೇಳಿದನು.


ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.


ನಿಮಗೆ ಸತ್ಯವಾಗಿ ಹೇಳುತ್ತೇನೆ - ಆಕಾಶವೂ ಭೂವಿುಯೂ ಅಳಿದು ಹೋಗುವ ತನಕ ಧರ್ಮಶಾಸ್ತ್ರವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದುಹೋಗಲಾರದು.


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಎಂದು ನಿಮಗೆ ತಿರಿಗಿ ಹೇಳುತ್ತೇನೆ ಅಂದನು.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಡು; ಎರಡು ಕಣ್ಣುಳ್ಳವನಾಗಿದ್ದು ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ದೇವರ ರಾಜ್ಯದಲ್ಲಿ ಸೇರುವದು ನಿನಗೆ ಉತ್ತಮ.


ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.


ನಿಕೊದೇಮನು ಆತನನ್ನು - ಮನುಷ್ಯನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ತಿರಿಗಿ ಸೇರಿ ಹುಟ್ಟುವದಾದೀತೇ? ಎಂದು ಕೇಳಿದನು.


ಯಾಕಂದರೆ ದೇವರಿಂದ ಹುಟ್ಟಿರುವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥದು ನಮ್ಮ ನಂಬಿಕೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು