Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:4 - ಕನ್ನಡ ಸತ್ಯವೇದವು J.V. (BSI)

4 ನಿಕೊದೇಮನು ಆತನನ್ನು - ಮನುಷ್ಯನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ತಿರಿಗಿ ಸೇರಿ ಹುಟ್ಟುವದಾದೀತೇ? ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಕೊದೇಮನು ಯೇಸುವಿಗೆ, “ಒಬ್ಬನು ವಯಸ್ಸಾದ ಮೇಲೆ ಮತ್ತೆ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಾದೀತೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ನಿಕೊದೆಮಾನ್, “ಎಕ್ ಮೊಟ್ಯಾ ಮಾನ್ಸಾಕ್, ಅನಿ ಎಗ್ದಾ ಉಪ್ಜುನ್ ಯೆತಲೆ ಮಟ್ಲ್ಯಾರ್, ಕಶೆ?” ಮನುನ್ ಇಚಾರ್‍ಲ್ಯಾನ್, ಅನಿ “ಅನಿ ಪರ್ತುನ್ ಬಾಯ್ಚ್ಯಾ ಪೊಟಾತ್ ಗುಸುನ್ ದೊನ್ವೆಪಟಿ ಉಪಜ್‍ ಘೆವ್ಕ್ ತರ್ ಹೊಯ್ನಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:4
7 ತಿಳಿವುಗಳ ಹೋಲಿಕೆ  

ಪ್ರಾಕೃತಮನುಷ್ಯನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತಾಗಿ ತೋರುತ್ತವೆ; ಅವು ಆತ್ಮವಿಚಾರದಿಂದ ತಿಳಿಯ ತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸಲಾರನು.


ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು ಅಂದನು.


ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿನ್ನದೆ ಅವನ ರಕ್ತವನ್ನು ಕುಡಿಯದೆ ಹೋದರೆ ನಿಮ್ಮೊಳಗೆ ಜೀವವಿಲ್ಲ;


ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ - ಇದು ಕಠಿನವಾದ ಮಾತು, ಇದನ್ನು ಯಾರು ಕೇಳಾರು? ಅಂದುಕೊಂಡರು.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು