Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:20 - ಕನ್ನಡ ಸತ್ಯವೇದವು J.V. (BSI)

20 ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು; ಆದರೆ ನೀವು ಆರಾಧನೆಮಾಡತಕ್ಕ ಸ್ಥಳವು ಯೆರೂಸಲೇವಿುನಲ್ಲಿ ಅದೆ ಅನ್ನುತ್ತೀರಿ ಎಂದು ಹೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ಪೂರ್ವಜರು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸುತ್ತಿದ್ದರು. ಆದರೆ ಆರಾಧಿಸತಕ್ಕ ಕ್ಷೇತ್ರ ಇರುವುದು ಜೆರುಸಲೇಮಿನಲ್ಲೇ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಮ್ಮ ಪಿತೃಗಳು ಈ ಗುಡ್ಡದ ಮೇಲೆ ಆರಾಧಿಸಿದರು. ಆದರೆ ಜನರು ಆರಾಧಿಸಬೇಕಾದ ಸ್ಥಳ ಜೆರುಸಲೇಮ್ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಮ್ಮ ಪಿತೃಗಳು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸಿದರು. ಆದರೆ, ‘ಆರಾಧಿಸತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ’ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮ್ಚ್ಯಾ ಸಮಾರಿಯಾಚ್ಯಾ ಅದ್ಲ್ಯಾ ಲೊಕಾನಿ ತ್ಯಾ ಮಡ್ಡಿ ವರ್ತಿ ಆರಾದನ್ ಕರ್ಲ್ಯಾನಿ, ಖರೆ ತುಮಿ ಜುದೆವ್ ಲೊಕಾ ದೆವಾಚಿ ಆರಾದನ್ ಕರ್‍ತಲೊ ಜಾಗೊ ಜೆರುಜಲೆಮ್, ಅನಿ ಜೆರುಲೆಮಾತುಚ್ ಯೆವ್ನ್ ತೆಚೆ ಆರಾದನ್ ಕರುಚಿ ಮನುನ್ ಸಾಂಗ್ತ್ಯಾಶಿ” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:20
20 ತಿಳಿವುಗಳ ಹೋಲಿಕೆ  

ನೀವು ಯೊರ್ದನ್ ಹೊಳೆಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.


ಯೆಹೋವನು ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ ಈ ಮನೆಯನ್ನು ನನ್ನ ಯಜ್ಞಾಲಯಕ್ಕಾಗಿ ಆರಿಸಿಕೊಂಡಿದ್ದೇನೆ.


ಆದರೆ ಆತನು ಯೆರೂಸಲೇವಿುಗೆ ಹೋಗುವವನಾದದರಿಂದ ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.


ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.


ಯೆಹೂದಕುಲವನ್ನೂ ತನ್ನ ಪ್ರಿಯ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.


ನನ್ನ ನಾಮಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲೇ ಇರುವವು.


ಆದರೆ ಈಗ ನನ್ನ ನಾಮಸ್ಥಾಪನೆಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ಇದೇ ದೇವರಾದ ಯೆಹೋವನ ಆಲಯ, ಇದೇ ಇಸ್ರಾಯೇಲ್ಯರು ಯಜ್ಞವರ್ಪಿಸತಕ್ಕ ವೇದಿ ಎಂದು ಹೇಳಿದನು.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿ ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ


ಆತನು ಅವನಿಗೆ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ಯೆಹೋವನು ಹೀಗನ್ನುತ್ತಾನೆ - ಆಕಾಶವು ನನಗೆ ಸಿಂಹಾಸನ, ಭೂವಿುಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ನಮ್ಮ ಹಿರಿಯನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು; ಅವನೂ ಅವನ ಮಕ್ಕಳೂ ಅವನು ಸಾಕಿದೆಲ್ಲವೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದರು ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು