Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:36 - ಕನ್ನಡ ಸತ್ಯವೇದವು J.V. (BSI)

36 ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಪಿಕಾ ಕಾತರ್‍ತಲ್ಯಾಕ್ ತೆಂಚಿ ಮಜುರಿ ದಿವ್ನ್ ಹೊಲಾ, ಅನಿ ತೊ ತೆ ಪಿಕ್ಕ್ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಸಾಟ್ನಿ ಗೊಳಾ ಕರ್‍ತಾ; ಅಶೆ ಪೆರಲ್ಲೊ ಅನಿ ಕಾತರ್‍ತಲೊ ದೊಗೆಬಿ ವಾಂಗ್ಡಾ ಕುಶಿ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:36
20 ತಿಳಿವುಗಳ ಹೋಲಿಕೆ  

ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ನಮ್ಮ ಕರ್ತನಾದ ಯೇಸು ಪ್ರತ್ಯಕ್ಷನಾಗುವಾಗ ಆತನ ಮುಂದೆ ನಮ್ಮ ಭರವಸವೂ ನಮ್ಮ ಸಂತೋಷವೂ ನಾವು ಹೊಗಳಿಕೊಳ್ಳುವ ಜಯಮಾಲೆಯೂ ಯಾರು? ನೀವೇ ಅಲ್ಲವೇ.


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಬಹುಮಾನ ದೊರೆಯುವದು; ಮತ್ತೊಬ್ಬನ ಇಷ್ಟದಿಂದ ಮಾಡಿದರೆ ಮನೆವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿದೆ.


ಹಾಗಾದರೆ ನನಗಾಗುವ ಬಹುಮಾನವೇನು? ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನ ಮಾಡುವ ಹಕ್ಕನ್ನು ನಡಿಸದೆ ಅದನ್ನು ಉಚಿತಾರ್ಥವಾಗಿ ದಾನಮಾಡುವದೇ ನನಗೆ ಬಹುಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು