Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:42 - ಕನ್ನಡ ಸತ್ಯವೇದವು J.V. (BSI)

42 ಆ ಹೆಂಗಸಿಗೆ - ನಾವು ಆತನನ್ನು ನಂಬಿರುವದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ; ನಾವು ಕಿವಿಯಾರೆ ಕೇಳಿ ಈತನು ಲೋಕರಕ್ಷಕನೇ ಹೌದೆಂದು ತಿಳುಕೊಂಡಿದ್ದೇವೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವರು ಆ ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಅನಿ ತೆನಿ ತ್ಯಾ ಬಾಯ್ಕೊಮನ್ಸಿಕ್, “ಅಮಿ ಅತ್ತಾ ವಿಶ್ವಾಸ್, ಕರ್‍ತಾವ್, ಖಾಲಿ ತಿಯಾ ಸಾಂಗಲ್ಲ್ಯಾ ಗೊಸ್ಟಿ ವೈನಾ ನ್ಹಯ್, ಅಮಿ ಅಮ್ಚ್ಯಾ ಕಾನಾನಿ ತೆನಿ ಸಾಂಗ್ತಲಿ ಖಬರ್ ಆಯಿಕ್ಲಾಂವ್, ಅನಿ ಹ್ಯೊಚ್ ಹ್ಯಾ ಜಗಾಚೊ ರಾಕ್‍ನ್ದಾರ್ ಮನುನ್ ಅಮ್ಕಾ ಕಳ್ಳೆ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:42
23 ತಿಳಿವುಗಳ ಹೋಲಿಕೆ  

ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಇದಕ್ಕಾಗಿ ನಾವು ಕಷ್ಟಪಡುತ್ತೇವೆ, ಹೋರಾಡುತ್ತೇವೆ, ಯಾಕಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡಿದ್ದೇವೆ.


ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ಹೇಳಿದನು; ಬಂದು ಅವನನ್ನು ನೋಡಿರಿ; ಬರತಕ್ಕ ಕ್ರಿಸ್ತನು ಅವನೇ ಏನೋ? ಎಂದು ಹೇಳಲು


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ನಾಲ್ಕು ದಿವಸವಾಯಿತೆಂದು ಆತನಿಗೆ ತಿಳಿದುಬಂತು.


ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿ


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು