Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:46 - ಕನ್ನಡ ಸತ್ಯವೇದವು J.V. (BSI)

46 ಹೀಗಿರಲಾಗಿ ಯೇಸು, ತಾನು ನೀರನ್ನು ದ್ರಾಕ್ಷಾರಸವಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಬಂದನು. ಅಲ್ಲಿದ್ದಾಗ ಅರಮನೆಯ ಒಬ್ಬ ಪ್ರಧಾನನ ಮಗನು ಕಪೆರ್ನೌವಿುನಲ್ಲಿ ಅಸ್ವಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಯೇಸು ಗಲಿಲೇಯದ ಕಾನಾ ಊರಿಗೆ ಮರಳಿ ಬಂದರು. ಅವರು ಹಿಂದೆ ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ್ದು ಅಲ್ಲಿಯೇ. ಕಫೆರ್ನವುಮಿನಲ್ಲಿ ರಾಜಸೇವೆಯಲ್ಲಿದ್ದ ಒಬ್ಬ ಅಧಿಕಾರಿಯ ಮಗನಿಗೆ ಕಾಯಿಲೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೇಸು ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಭೇಟಿ ನೀಡಿದನು. ಆತನು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು ಆ ಊರಿನಲ್ಲೇ. ರಾಜನ ಒಬ್ಬ ಅಧಿಕಾರಿಯು ಕಪೆರ್ನೌಮ್ ಪಟ್ಟಣದಲ್ಲಿ ವಾಸವಾಗಿದ್ದನು. ಅವನ ಮಗನಿಗೆ ಕಾಯಿಲೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ತಿರುಗಿ ಬಂದರು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಮಾನಾ ಜೆಜು ಅಪ್ನಿ ಪಾನಿ ಹೊತ್ತೆ ವಾಯ್ನ್ ಕರುನ್ ಬದ್ಲಲ್ಲ್ಯಾ ಗಾಲಿಲಿಯಾ ಪ್ರಾಂತ್ಯಾತ್ಲ್ಯಾ ಕಾನಾ ಮನ್ತಲ್ಯಾ ಗಾಂವಾಕ್ ಗೆಲೊ ಥೈ ಎಕ್ ಸರ್ಕಾರಾಚೊ ಮೊಟೊ ಅದಿಕಾರಿ ಹೊತ್ತೊ ತೆಚೊ ಲೆಕ್ ಶಿಕ್ ಹೊತ್ತೊ ತೊ ಲೆಕ್ ಕಫರ್ನವ್ ಮನ್ತಲ್ಯಾ ಗಾಂವಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:46
14 ತಿಳಿವುಗಳ ಹೋಲಿಕೆ  

ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು.


ಆ ಸೀಮೆಯಿಂದ ಕಾನಾನ್ಯರವಳೊಬ್ಬಳು ಹೊರಟು ಬಂದು - ಸ್ವಾಮೀ, ದಾವೀದನ ಕುಮಾರನೇ, ನನ್ನನ್ನು ಕರುಣಿಸು. ನನ್ನ ಮಗಳಿಗೆ ದೆವ್ವದ ಕಾಟ ಬಹಳವಾಗಿದೆ ಎಂದು ಕೂಗಿಕೊಂಡಳು.


ಹೀಗೆ ಆತನು ಅವರೊಂದಿಗೆ ಮಾತಾಡುತ್ತಿರುವಾಗ ಒಬ್ಬ ಅಧಿಕಾರಿ ಬಂದು ಆತನಿಗೆ ಅಡ್ಡಬಿದ್ದು - ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು ಎಂದು ಬೇಡಿಕೊಳ್ಳಲು


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ತನ್ನನ್ನು ತೋರಿಸಿಕೊಂಡ ರೀತಿ ಯಾವದಂದರೆ - ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಕುಮಾರರೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿದ್ದರು.


ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ ತಿರುಗಿ ಆತನ ಪ್ರಸನ್ನತೆಯನ್ನು ಆಶಿಸಿ -


ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು.


ಆತನು ಅವರಿಗೆ - ನೀವಂತೂ ವೈದ್ಯನೇ, ನಿನ್ನನ್ನೇ ವಾಸಿಮಾಡಿಕೋ ಎಂಬ ಗಾದೆಯನ್ನು ನನಗೆ ಹೇಳಿ ಕಪೆರ್ನೌವಿುನಲ್ಲಿ ಎಂಥೆಂಥ ಕಾರ್ಯಗಳು ನಡೆದವೆಂದು ನಾವು ಕೇಳಿದೆವೋ ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿ ಮಾಡು ಅನ್ನುವಿರಷ್ಟೆ.


ಇದಾದ ಮೇಲೆ ಆತನೂ ಆತನ ತಾಯಿಯೂ ತಮ್ಮಂದಿರೂ ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌವಿುಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು