Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:7 - ಕನ್ನಡ ಸತ್ಯವೇದವು J.V. (BSI)

7-8 ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವದಕ್ಕಾಗಿ ಊರೊಳಗೆ ಹೋಗಿರಲು ಸಮಾರ್ಯದವಳಾದ ಒಬ್ಬ ಹೆಂಗಸು ನೀರು ಸೇದುವದಕ್ಕೆ ಬಂದಳು. ಯೇಸು ಆಕೆಯನ್ನು - ಅಮ್ಮಾ, ನೀರು ಕುಡಿಯುವದಕ್ಕೆ ಕೊಡು ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಬ್ಬ ಸಮಾರಿಯದ ಮಹಿಳೆ ನೀರು ಸೇದಲು ಅಲ್ಲಿಗೆ ಬಂದಳು. ಆಗ ಯೇಸು, “ಕುಡಿಯಲು ಕೊಂಚ ನೀರು ಕೊಡು,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಮಾರ್ಯದ ಸ್ತ್ರೀಯೊಬ್ಬಳು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬಂದಳು. ಯೇಸು ಆಕೆಗೆ, “ದಯವಿಟ್ಟು, ಕುಡಿಯಲು ಸ್ವಲ್ಪ ನೀರು ಕೊಡು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಸಮಾರ್ಯದವಳಾದ ಒಬ್ಬ ಸ್ತ್ರೀಯು ನೀರು ಸೇದುವುದಕ್ಕಾಗಿ ಬಂದಳು. ಯೇಸು ಆಕೆಗೆ, “ನನಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಎಕ್ ಸಮಾರಿಯಾಚಿ ಬಾಯ್ಕೊಮನುಸ್ ಪಾನಿ ನ್ಹೆವ್ಕ್ ಮನುನ್ ಭಾಂಯ್‍ಕ್ಡೆ ಯೆಲಿ, ತನ್ನಾ ಜೆಜುನ್ ತಿಕಾ,“ಮಾಕಾ ಉಲ್ಲೆ ಫಿವ್ಕ್ ಪಾನಿ ದಿ?” ಮಟ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:7
9 ತಿಳಿವುಗಳ ಹೋಲಿಕೆ  

ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಅವನು ಅಲ್ಲಿಂದ ಹೊರಟು ಚಾರೆಪ್ತದ ಊರುಬಾಗಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕೂಗಿ - ದಯವಿಟ್ಟು ಕುಡಿಯುವದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ ಎಂದು ಹೇಳಿದನು.


ನೀನು ದಯವಿಟ್ಟು ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವದಕ್ಕೆ ಕೊಡಮ್ಮಾ ಎಂದು ನಾನು ಹೇಳುವಾಗ


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಇದಾದ ಮೇಲೆ ಯೇಸು ಈಗ ಎಲ್ಲಾ ತೀರಿತೆಂದು ತಿಳಿದು ಶಾಸ್ತ್ರದ ಮಾತು ನೆರವೇರುವಂತೆ - ನನಗೆ ನೀರಡಿಕೆ ಆಗಿದೆ ಅಂದನು.


ಆ ಸೇವಕನು ಓಡಿಬಂದು ಎದುರುಗೊಂಡು - ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಳ್ಳಲು


ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ದಾರಿನಡೆದು ದಣಿದು ಆ ಬಾವಿಯ ಬಳಿಯಲ್ಲಿ ಹಾಗೆ ಕೂತುಕೊಂಡನು; ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು