Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:9 - ಕನ್ನಡ ಸತ್ಯವೇದವು J.V. (BSI)

9 ಯೆಹೂದ್ಯರಿಗೂ ಸಮಾರ್ಯರಿಗೂ ಬಳಕೆಯಿಲ್ಲದಿರಲಾಗಿ ಆ ಸಮಾರ್ಯದವಳು ಆತನಿಗೆ - ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ನೀರು ಬೇಡುವದು ಹೇಗೆ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೆ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೋ ಯೆಹೂದ್ಯನು. ನಾನಾದರೋ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ಆ ಸಮಾರ್ಯ ಸ್ತ್ರೀಯು ಯೇಸುವಿಗೆ, “ನೀನು ಯೆಹೂದ್ಯನಾಗಿದ್ದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದು ಹೇಗೆ,” ಎಂದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಒಡನಾಟ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ತ್ಯಾ ಬಾಯ್ಕೊಮನ್ಸಿನ್, “ತಿಯಾ ಎಕ್ ಜುದೆವ್, ಅನಿ ಮಿಯಾ ಎಕ್ ಸಮಾರಿಯಾಕಾರ್‍ನಿ- ತಿಯಾ ಮಾಜಾಕ್ಡೆ ಫಿವ್ಕ್ ಪಾನಿ ದಿ ಮನುನ್ ಕಶೆ ಮಾಗುಲಾಲೆಯ್?” ಮನುನ್ ಜವಾಬ್ ದಿಲಿನ್ ಜುದೆವ್ ಲೊಕಾ ಅನಿ ಸಮಾರಿಯಾಚ್ಯಾ ಲೊಕಾಂಚ್ಯಾ ಮದ್ದಿ ಕಸ್ಲೊಬಿ ಸಮಂದ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:9
12 ತಿಳಿವುಗಳ ಹೋಲಿಕೆ  

ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವರಿಗೆ - ಯೆಹೂದ್ಯರು ಅನ್ಯಜನರ ಕೂಡ ಹೊಕ್ಕು ಬಳಿಕೆಮಾಡುವದು ಯೆಹೂದ್ಯರ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರದೆಂದು ದೇವರು ತೋರಿಸಿದ್ದಾನೆ.


ಅದಕ್ಕೆ ಯೆಹೂದ್ಯರು - ನೀನು ಸಮಾರ್ಯನೂ ದೆವ್ವಹಿಡಿದವನೂ ಆಗಿದ್ದೀ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಲು


ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು. ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ - ಅನ್ಯಜನಗಳ ಕಡೆಗೆ ಹೋಗಬೇಡಿರಿ, ಸಮಾರ್ಯರ ಊರೊಳಗೆ ಕಾಲಿಡಬೇಡಿರಿ;


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಒಬ್ಬ ಹೆಂಗಸಿನ ಸಂಗಡ ಮಾತಾಡುತ್ತಿರುವದನ್ನು ಕಂಡು ಆಶ್ಚರ್ಯಪಟ್ಟರು. ಆದರೂ - ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತಾಡುತ್ತೀ? ಎಂದು ಒಬ್ಬರೂ ಕೇಳಲಿಲ್ಲ.


ಆದರೆ ಒಬ್ಬ ಸಮಾರ್ಯದವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದು ಅವನನ್ನು ಕಂಡು


ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರಿಸಬೇಕು; ಅವನು ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿ ಅದೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು