Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:14 - ಕನ್ನಡ ಸತ್ಯವೇದವು J.V. (BSI)

14 ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು - ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪಮಾಡಬೇಡ; ನಿನಗೆ ಹೆಚ್ಚಿನ ಕೇಡು ಬಂದೀತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾನಾಸರ್ ತೆಕಾ ಜೆಜು ದೆವಾಚ್ಯಾ ಗುಡಿತ್ ಭೆಟ್ಲೊ, ಅನಿ, “ಆಯ್ಕ್, ತಿಯಾ ಅತ್ತಾ ಗುನ್ ಹೊಲೆ, ತೆಚೆಸಾಟ್ನಿ ಪಾಪ್ ಕರುನಕೊ, ಅನಿಬಿ ತುಕಾ ಕಾಯ್ಬಿ ವಾಯ್ಟ್ ಹೊತಲೆ ನಕ್ಕೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:14
23 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ - ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಎಂದು ಹೇಳಿದನು.]


ಯಾಹು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ಒಪ್ಪಿಸಲಿಲ್ಲ.


ಉಪಶಮನವನ್ನು ಪಡೆದ ಮೇಲೆ ಅವರು ತಿರಿಗಿ ದ್ರೋಹಿಗಳಾಗಿ ನಡೆಯುತ್ತಿರುವದನ್ನು ನೀನು ಕಂಡು ಅವರ ಮೇಲೆ ದೊರೆತನ ನಡಿಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದಿ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿ -


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.


ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ


ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ - ಮಗನೇ, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ಯೆಹೋವನು ನನಗೆ ರಕ್ಷಣಪರನಾಗಿದ್ದಾನಷ್ಟೆ; ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.


ಹೀಗಿರುವದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ ನನ್ನ ತಲೆ ಎತ್ತಲ್ಪಟ್ಟಿರುವದು; ನಾನು ಯೆಹೋವನ ಗುಡಾರದಲ್ಲಿ ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.


ಅಲ್ಲಿ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.


ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು.


ಹಿಜ್ಕೀಯನು - ನಾನು [ಗುಣಹೊಂದಿ] ಯೆಹೋವನ ಆಲಯವನ್ನು ಸೇರುವೆನೆಂಬದಕ್ಕೆ ಗುರುತೇನು ಎಂದು ಕೇಳಿದ್ದನು).


ಆದರೆ ಅವನಾರೆಂಬದು ಸ್ವಸ್ಥವಾದವನಿಗೆ ತಿಳಿದಿರಲಿಲ್ಲ; ಆ ಸ್ಥಳದಲ್ಲಿ ಜನರ ಗುಂಪು ಇದ್ದದರಿಂದ ಯೇಸು ಸರಕೊಂಡುಹೋಗಿದ್ದನು.


ಯಾಜಕನು ನೋಡುವಾಗ ಆ ಕಲೆ ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠಹುಟ್ಟಿದದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.


ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು