Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:16 - ಕನ್ನಡ ಸತ್ಯವೇದವು J.V. (BSI)

16 ಆದಕಾರಣ ಯೆಹೂದ್ಯರು - ಯೇಸು ಸಬ್ಬತ್‍ದಿನದಲ್ಲಿ ಇಂಥ ಕೆಲಸಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು ಈ ಕಾರ್ಯಗಳನ್ನು ಸಬ್ಬತ್‌ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚೆಸಾಟ್ನಿ ತೆನಿ ಜೆಜುಕ್ ತರಾಸ್ ದಿವ್ಕ್ ಚಾಲು ಕರ್ಲ್ಯಾನಿ. ಕಶ್ಯಾಕ್ ಮಟ್ಲ್ಯಾರ್ ತೆನಿ ಹೆ ಕಾಮ್ ಸಬ್ಬಾತಾ ದಿಸಿ ಕರಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:16
15 ತಿಳಿವುಗಳ ಹೋಲಿಕೆ  

ದಣಿಗಿಂತ ಆಳು ದೊಡ್ಡವನಲ್ಲವೆಂಬದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು; ಅವರು ನನ್ನ ಮಾತನ್ನು ಕೈಕೊಂಡು ನಡೆದರೆ ನಿಮ್ಮ ಮಾತನ್ನು ಸಹ ಕೈಕೊಂಡು ನಡೆಯುವರು.


ಅವರು ತಿರಿಗಿ ಆತನನ್ನು ಹಿಡಿಯುವದಕ್ಕೆ ನೋಡಿದರು; ಆದರೆ ಅವರ ಕೈಗೆ ತಪ್ಪಿಸಿಕೊಂಡು ಹೋದನು.


ಯೆರೂಸಲೇವಿುನವರಲ್ಲಿ ಕೆಲವರು - ಇವನನ್ನಲ್ಲವೇ ಅವರು ಕೊಲ್ಲಬೇಕೆಂದಿರುವದು?


ಆದರೆ ಅವನಾರೆಂಬದು ಸ್ವಸ್ಥವಾದವನಿಗೆ ತಿಳಿದಿರಲಿಲ್ಲ; ಆ ಸ್ಥಳದಲ್ಲಿ ಜನರ ಗುಂಪು ಇದ್ದದರಿಂದ ಯೇಸು ಸರಕೊಂಡುಹೋಗಿದ್ದನು.


ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಫರಿಸಾಯರು ಹೊರಕ್ಕೆ ಹೋಗಿ ಕೂಡಲೆ ಹೆರೋದ್ಯರನ್ನು ಕೂಡಿಕೊಂಡು ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.


ನಿನ್ನ ಕೈ ಚಾಚು ಎಂದು ಹೇಳಿದನು; ಅವನು ಚಾಚಿದನು. ಅದು ಸಂಪೂರ್ಣ ವಾಸಿಯಾಗಿ ಮತ್ತೊಂದರ ಹಾಗಾಯಿತು.


ಯೋಹಾನನು ಕೊಟ್ಟ ಸಾಕ್ಷಿ ಏನಂದರೆ - ಯೆಹೂದ್ಯರು ಯೆರೂಸಲೇವಿುನಿಂದ ಯಾಜಕರನ್ನೂ ಲೇವಿಯರನ್ನೂ ಅವನ ಬಳಿಗೆ ಕಳುಹಿಸಿ - ನೀನು ಯಾರೆಂದು ಕೇಳಿದ್ದಕ್ಕೆ


ಆದರೆ ಆ ದಿವಸ ಸಬ್ಬತ್‍ದಿನವಾಗಿತ್ತು; ಹೀಗಿರುವದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ - ಈ ಹೊತ್ತು ಸಬ್ಬತ್‍ದಿನವಾಗಿದೆ; ನೀನು ಹಾಸಿಗೆಯನ್ನು ಹೊರುವದು ಸರಿಯಲ್ಲವೆಂದು ಹೇಳಿದ್ದಕ್ಕೆ


ಆ ಮನುಷ್ಯನು ಅಲ್ಲಿಂದ ಹೋಗಿ - ನನ್ನನ್ನು ಸ್ವಸ್ಥಮಾಡಿದವನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.


ಅದಕ್ಕೆ ಯೇಸು - ನನ್ನ ತಂದೆಯು ಇಂದಿನವರೆಗೂ ಕೆಲಸಮಾಡುತ್ತಾನೆ, ನಾನೂ ಕೆಲಸಮಾಡುತ್ತೇನೆ ಅಂದನು.


ಈ ಮಾತನ್ನು ಹೇಳಿದ್ದರಿಂದ ಆತನು ಸಬ್ಬತ್‍ದಿನವನ್ನು ಅಲಕ್ಷ್ಯಮಾಡಿದ್ದಲ್ಲದೆ ದೇವರನ್ನು ತನ್ನ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಗಟ್ಟಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಮತ್ತಷ್ಟು ಪ್ರಯತ್ನಮಾಡಿದರು.


ಯೇಸು ಅವರಿಗೆ - ಒಂದೇ ಕ್ರಿಯೆಯನ್ನು ಮಾಡಿದೆನು; ಅದಕ್ಕೆ ನೀವೆಲ್ಲರು ಬೆರಗಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು