Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:19 - ಕನ್ನಡ ಸತ್ಯವೇದವು J.V. (BSI)

19 ಅದಕ್ಕೆ ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡು ಮಗನು ಮಾಡುತ್ತಾನೆ ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅದಕ್ಕೆ ಉತ್ತರವಾಗಿ ಆತನು ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಮಗನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ತಂದೆಯು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ತಂದೆಯು ಮಾಡುವ ಕಾರ್ಯಗಳನ್ನೇ ಮಗನೂ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಪುತ್ರನು ಮಾಡುತ್ತಾನೆ ಹೊರತು ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ತಂದೆ ಯಾವುದನ್ನೆಲ್ಲಾ ಮಾಡುವರೋ ಹಾಗೆಯೇ ಪುತ್ರನೂ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಸೆ ಮನುನ್ ಜೆಜುನ್ ತೆಂಕಾ ಸಾಂಗ್ಲ್ಯಾನ್, ಮಿಯಾ ತುಮ್ಕಾ ಖರೆ ಸಾಂಗ್ತಾ; ಲೆಕಾನ್ ಅಪ್ನಾಚ್ಯಾ ಅಪ್ನಿಚ್ ಕಾಯ್ ಬಿ ಕರುಕ್ ಹೊಯ್ನಾ, ತೊ ಅಪ್ನಾಚ್ಯಾ ಬಾಬಾನ್ ಕರಲ್ಲೆ ಬಗಟಲ್ಲೆಚ್ ಕರ್‍ತಾ . ಬಾಬಾ ಜೆ ಕಾಯ್ ಕರ್‍ತಾ ತೆಚ್ ಲೆಕ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:19
43 ತಿಳಿವುಗಳ ಹೋಲಿಕೆ  

ಯಾಕಂದರೆ ನನ್ನಷ್ಟಕ್ಕೆ ನಾನೇ ಮಾತಾಡಿದವನಲ್ಲ; ನನ್ನನ್ನು ಕಳುಹಿಸಿಕೊಟ್ಟ ತಂದೆಯೇ - ನೀನು ಇಂಥಿಂಥದನ್ನು ಹೇಳಬೇಕು, ಹೀಗೆ ಹೀಗೆ ಮಾತಾಡಬೇಕು ಎಂಬದಾಗಿ ನನಗೆ ಆಜ್ಞೆಕೊಟ್ಟಿದ್ದಾನೆ.


ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.


ನಾನು ತಂದೆಯಲ್ಲಿದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕ್ರಿಯೆಗಳನ್ನು ನಡಿಸುತ್ತಾನೆ.


ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆಯರು, ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ; ಅದನ್ನು ಕೊಡುವದಕ್ಕೆ ನನಗೆ ಅಧಿಕಾರ ಉಂಟು, ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರ ಉಂಟು; ಈ ಅಪ್ಪಣೆಯನ್ನು ನನ್ನ ತಂದೆಯಿಂದ ಹೊಂದಿದ್ದೇನೆ ಅಂದನು.


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ನನ್ನನ್ನು ಕಳುಹಿಸಿದಾತನ ಕಾರ್ಯಗಳನ್ನು ನಾವು ಹಗಲಿರುವಾಗಲೇ ನಡಿಸಬೇಕು. ರಾತ್ರಿ ಬರುತ್ತದೆ, ಅದು ಬಂದ ಮೇಲೆ ಯಾರೂ ಕೆಲಸ ಮಾಡಲಾರರು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆಂದು ತಿಳುಕೊಳ್ಳಿರಿ.


ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು ಅಂದನು.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.


ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ.


ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಭೂಪರಲೋಕಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನಗಳಾಗಲಿ ಪ್ರಭುತ್ವಗಳಾಗಲಿ ದೊರೆತನಗಳಾಗಲಿ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನ ಮುಖಾಂತರವಾಗಿಯೂ ಆತನಿಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.


ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರೋಣವಾಗುತ್ತಿರುವಲ್ಲಿ ನಿಮ್ಮೊಳಗೆ ಕೆಲವರು - ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವದು ಹೇಗೆ?


ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ಹೊಸಬರಾಗಿ ನಡಕೊಳ್ಳಬೇಕು.


ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.


ಯೇಸು - ಈ ದೇವಾಲಯವನ್ನು ಕೆಡವಿರಿ; ನಾನು ಮೂರು ದಿನದಲ್ಲಿ ಅದನ್ನು ಎಬ್ಬಿಸುವೆನು ಅಂದನು.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಸರ್ವಕಾರ್ಯಕರ್ತನಾದ ಯೆಹೋವನು, ನಾನೊಬ್ಬನೇ ಗಗನಮಂಡಲವನ್ನು ಹರವಿ ಭೂಮಂಡಲವನ್ನು ವಿಸ್ತರಿಸುವವನಾಗಿದ್ದೇನೆ; ನನಗೆ ಸಹಾಯಕನುಂಟೋ?


ಮನುಷ್ಯರಿಗೆ ಬಾಯಿ ಕೊಟ್ಟವರಾರು? ಒಬ್ಬನು ಮೂಕನಾಗಿ ಮತ್ತೊಬ್ಬನು ಕಿವುಡನಾಗಿ ಒಬ್ಬನು ಕಣ್ಣುಳ್ಳವನಾಗಿ ಮತ್ತೊಬ್ಬನು ಕಣ್ಣಿಲ್ಲದವನಾಗಿ ಇರಬೇಕೆಂದು ನೇವಿುಸಿದವರಾರು? ಯೆಹೋವನಾಗಿರುವ ನಾನಲ್ಲವೇ.


ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ಆತನ ಮಹಿಮಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷ್ಠರಾಗಿ ಆನಂದಪೂರ್ವಕವಾದ ತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಯಾವಾಗಲೂ ತೋರಿಸುವವರಾಗಿರಬೇಕೆಂತಲೂ


ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.


ನನ್ನ ಚಿತ್ತದಂತೆ ನಡೆಯುವದಕ್ಕಾಗಿ ನಾನು ಬಂದಿಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದಾತನ ಚಿತ್ತವು ಏನಂದರೆ ಆತನು


ಆತನ ಆಜ್ಞೆ ನಿತ್ಯಜೀವವಾಗಿದೆ ಎಂದು ಬಲ್ಲೆನು. ಆದದರಿಂದ ನಾನು ಮಾತಾಡುವದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತಾಡುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು