Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:20 - ಕನ್ನಡ ಸತ್ಯವೇದವು J.V. (BSI)

20 ತಂದೆಯು ಮಗನ ಮೇಲೆ ಮಮತೆಯಿಟ್ಟು ತಾನು ಮಾಡುವವುಗಳನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ದೊಡ್ಡ ಕೆಲಸಗಳನ್ನು ಅವನಿಗೆ ತೋರಿಸುವನು; ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಂದೆ ಪುತ್ರನನ್ನು ಪ್ರೀತಿಸಿ ತಾನು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ನೀವು ಆಶ್ಚರ್ಯಪಡುವಂತೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಪುತ್ರನಿಗೆ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಬಾಬಾ ಲೆಕಾಚೊ ಪ್ರೆಮ್ ಕರ್‍ತಾ, ಅನಿ ತೊ ಅಪ್ನಿ ಕಾಯ್ ಕರ್‍ತಾ ತೆ ಸಗ್ಳೆ ಲೆಕಾಕ್ ದಾಕ್ವುತಾ. ಹೆಚ್ಯೆನ್ಬಿ ಮೊಟಿ ಕಾಮಾ ಕರುಕ್ ಬಾಬಾ ಲೆಕಾಕ್ ಶಿಕ್ವುನ್ ದಿತಾ. ಅಶೆ ತುಮಿ ಸಗ್ಳೆ ಅಜಾಪ್ ಹೊತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:20
17 ತಿಳಿವುಗಳ ಹೋಲಿಕೆ  

ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ಮೆಚ್ಚಿದ್ದೇನೆ ಎಂಬಂಥ ವಾಣಿಯು ಸರ್ವೋತ್ಕೃಷ್ಟಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಘನಮಾನಗಳನ್ನು ಹೊಂದಿದನಲ್ಲವೇ.


ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು. ನೀನು ನನ್ನ ಮೇಲೆ ಇಟ್ಟಂಥ ಪ್ರೀತಿಯು ಅವರಲ್ಲಿ ಇರಬೇಕೆಂದೂ ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ ಅಂದನು.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ಯೇಸು ಅವರನ್ನು - ತಂದೆಯ ಕಡೆಯಿಂದ ಅನೇಕ ಒಳ್ಳೇ ಕ್ರಿಯೆಗಳನ್ನು ನಿಮಗೆ ತೋರಿಸಿದೆನು; ಅವುಗಳಲ್ಲಿ ಯಾವ ಕ್ರಿಯೆಯ ದೆಸೆಯಿಂದ ನನ್ನ ಮೇಲೆ ಕಲ್ಲೆಸೆಯುತ್ತೀರಿ ಎಂದು ಕೇಳಿದ್ದಕ್ಕೆ


ಎದ್ದು ಹೊರಗೆ ಬರುವ ಕಾಲ ಬರುತ್ತದೆ. ಒಳ್ಳೇದನ್ನು ಮಾಡಿದವರಿಗೆ ಜೀವಕ್ಕಾಗಿ ಪುನರುತ್ಥಾನವಾಗುವದು; ಕೆಟ್ಟದ್ದನ್ನು ನಡಿಸಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವದು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆಂದು ತಿಳುಕೊಳ್ಳಿರಿ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಇಂಥವನೆಂದು ತಂದೆಯೇ ಹೊರತು ಇನ್ಯಾವನೂ ತಿಳಿದವನಲ್ಲ; ತಂದೆ ಇಂಥವನೆಂದು ಮಗನೇ ಹೊರತು ಇನ್ನಾವನೂ ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು