Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:23 - ಕನ್ನಡ ಸತ್ಯವೇದವು J.V. (BSI)

23 ಎಲ್ಲರು ತನಗೆ ಮಾನ ಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತಂದೆಯು ಇಚ್ಫೈಸುತ್ತಾನೆ. ಮಗನಿಗೆ ಮಾನಕೊಡದವನು ಅವನನ್ನು ಕಳುಹಿಸಿದ ತಂದೆಗೂ ಮಾನಕೊಡದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆಚ್ಯಾ ಸಾಟ್ನಿ ಸಗ್ಳೆ ಲೊಕಾ ಕವ್ಡೊ ಬಾಬಾಕ್ ಮಾನ್ ದಿತ್ಯಾತ್, ತವ್ಡೆಚ್ ಲೆಕಾಕ್ ಬಿ ಮಾನ್ ದಿತ್ಯಾತ್. ಜೆ ಕೊನ್ ಲೆಕಾಕ್ ಮಾನ್ ದಿ ನಾತ್, ತೆನಿ ತೆಕಾ ಧಾಡುನ್ ದಿಲ್ಲ್ಯಾ ಬಾಬಾಕ್‍ಬಿ ಮಾನ್ ದಿ ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:23
47 ತಿಳಿವುಗಳ ಹೋಲಿಕೆ  

ತಾನು ದೇವರ ಮಗನಿಗೆ ಸೇರಿದವನಲ್ಲವೆನ್ನುವವನು ತಂದೆಗೆ ಸೇರಿದವನಲ್ಲ; ತಾನು ಮಗನಿಗೆ ಸೇರಿದವನೆಂದು ಒಪ್ಪಿಕೊಳ್ಳುವವನು ತಂದೆಗೂ ಸೇರಿದವನಾಗಿದ್ದಾನೆ.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು.


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರವಿುಸಿ ಮುಂದಕ್ಕೆ ಹೋಗುವವನಿಗೆ ದೇವರ ಅನ್ಯೋನ್ಯತೆಯಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಉಂಟು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ಇದಲ್ಲದೆ ಆತನು ತನ್ನ ಚೊಚ್ಚಲ ಮಗನನ್ನು ಭೂಲೋಕದೊಳಗೆ ತಿರಿಗಿ ಬರಮಾಡುವಾಗ ದೇವರ ದೂತರೆಲ್ಲರೂ ಆತನಿಗೆ ಅಡ್ಡ ಬೀಳಲಿ ಎಂದು ಹೇಳುತ್ತಾನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ನೀವಾದರೋ, ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವದಾದರೆ ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾವನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವನಲ್ಲ.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುತ್ತಾ ನನ್ನನ್ನೇ ಮಹಿಮೆಪಡಿಸುವನು.


ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?


ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ.


ಮರಣವಾಗುತ್ತದೆಂಬ ನಿಶ್ಚಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಹೀಗಾಯಿತು.


ಅವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ಕರ್ತನು ಬರುತ್ತಾನೆ.


ಮತ್ತೊಂದು ಸ್ಥಳದಲ್ಲಿ ಯೆಶಾಯನು ಹೇಳುವದೇನಂದರೆ - ಇಷಯನ ಅಂಕುರದವನು ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ; ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನನ್ನದೆಲ್ಲಾ ನಿನ್ನದೇ, ನಿನ್ನದೆಲ್ಲಾ ನನ್ನದೇ; ಮತ್ತು ಇವರಿಂದ ನನಗೆ ಮಹಿಮೆ ಉಂಟಾಗಿದೆ.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.


ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು