Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:24 - ಕನ್ನಡ ಸತ್ಯವೇದವು J.V. (BSI)

24 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಜೆ ಕೊನ್ ಮಿಯಾ ಸಾಂಗಲ್ಲ್ಯಾ ಗೊಸ್ಟಿಯಾ ಆಯಿಕ್ತಾ, ಅನಿ ಮಾಕಾ ಧಾಡಲ್ಲ್ಯಾ ವರ್ತಿ ವಿಶ್ವಾಸ್ ಕರ್‍ತಾ, ತೆಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ. ತೆಂಚಿ ಝಡ್ತಿ ಕರುನ್ ಹೊಯ್ನಾ ತೆನಿ ಮರ್‍ನಾತ್ನಾ ಜಿವನಾಕ್ ಪಾರ್ ಹೊವ್ನ್ ಗೆಲ್ಲೆ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:24
28 ತಿಳಿವುಗಳ ಹೋಲಿಕೆ  

ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು.


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಮತ್ತು ಬದುಕುತ್ತಾ ನನ್ನನ್ನು ನಂಬುವ ಪ್ರತಿಯೊಬ್ಬನು ಎಂದಿಗೂ ಸಾಯುವದಿಲ್ಲ; ಇದನ್ನು ನಂಬುತ್ತೀಯಾ? ಎಂದು ಹೇಳಿದನು.


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯವನ್ನು ಕೈಕೊಂಡು ನಡೆದರೆ ಅವನು ಎಂದಿಗೂ ಸಾವನ್ನು ಕಾಣುವದಿಲ್ಲ ಅಂದನು.


ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ಯೇಸು ಕೂಗಿ ಹೇಳಿದ ಮಾತು ಏನಂದರೆ - ನನ್ನನ್ನು ನಂಬಿದವನು ನನ್ನನ್ನೇ ನಂಬುವವನಲ್ಲ; ನನ್ನನ್ನು ಕಳುಹಿಸಿಕೊಟ್ಟಾತನನ್ನು ನಂಬುವವನಾಗಿದ್ದಾನೆ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು.


ಪರಲೋಕದಿಂದ ಇಳಿದುಬರುವ ರೊಟ್ಟಿ ಎಂಥದಂದರೆ ಅದನ್ನು ತಿಂದವನು ಸಾಯುವದಿಲ್ಲ.


ಪರಲೋಕದಿಂದ ಇಳಿದುಬರುವ ಜೀವವುಳ್ಳ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾಕಾಲ ಬದುಕುವನು. ಮತ್ತು ನಾನು ಕೊಡುವ ರೊಟ್ಟಿ ನನ್ನ ಮಾಂಸವೇ; ಅದನ್ನು ಲೋಕದ ಜೀವಕ್ಕೋಸ್ಕರ ಕೊಡುವೆನು ಎಂದು ಹೇಳಿದನು.


ಪರಲೋಕದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಹಿರಿಯರು ಮನ್ನಾ ತಿಂದರೂ ಸತ್ತರು; ಇದು ಹಾಗಲ್ಲ; ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು