Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:25 - ಕನ್ನಡ ಸತ್ಯವೇದವು J.V. (BSI)

25 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ ಎಳ್ ಯೆವ್ಲಾ, ಎಳ್ ಯವ್ನುಚ್ ಪಾವ್ಲಾ. ಮರಲ್ಲಿ ಲೊಕಾ ದೆವಾಚ್ಯಾ ಲೆಕಾಚೊ ಧನ್ ಆಯಿಕ್ತ್ಯಾತ್ ಅನಿ ಜೆ ಕೊನ್ ಆಯಿಕ್ತ್ಯಾತ್ ತೆನಿ ಝಿತ್ತೆ ಹೊತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:25
19 ತಿಳಿವುಗಳ ಹೋಲಿಕೆ  

ಅದಕ್ಕೆ ಆಶ್ಚರ್ಯಪಡಬೇಡಿರಿ; ಸಮಾಧಿಗಳಲ್ಲಿರುವವರೆಲ್ಲರು ಆತನ ಧ್ವನಿಯನ್ನು ಕೇಳಿ


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಅದಿರಲಿ; ಸತ್ಯಭಾವದಿಂದ ದೇವಾರಾಧನೆ ಮಾಡುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ತಂದೆಯನ್ನು ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ; ತಂದೆಯು ತನ್ನನ್ನು ಆರಾಧಿಸುವವರು ಇಂಥವರೇ ಆಗಿರಬೇಕೆಂದು ಅಪೇಕ್ಷಿಸುತ್ತಾನಲ್ಲವೇ.


ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು.


ದೇವರಿಂದ ಹುಟ್ಟಿದವನು ದೇವರ ಮಾತುಗಳನ್ನು ಕೇಳುತ್ತಾನೆ. ನೀವು ದೇವರಿಂದ ಹುಟ್ಟದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.


ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ.


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ಹೊಸಬರಾಗಿ ನಡಕೊಳ್ಳಬೇಕು.


ನೀವು ನನ್ನ ಮಾತನ್ನು ಗ್ರಹಿಸದೆ ಇರುವದಕ್ಕೆ ಕಾರಣವೇನು? ನನ್ನ ಬೋಧನೆಗೆ ಕಿವಿಗೊಡಲಾರದೆ ಇರುವದೇ ಕಾರಣ.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆಂದು ತಿಳುಕೊಳ್ಳಿರಿ.


ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು.


ಆದರೆ ಆತನು ಅವನಿಗೆ - ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು ಎಂದು ಹೇಳಿದನು.


ಯೇಸು ಆಕೆಗೆ - ಅಮ್ಮಾ, ನಾನು ಹೇಳುವ ಮಾತನ್ನು ನಂಬು; ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ ಈ ಬೆಟ್ಟಕ್ಕೂ ಹೋಗುವದಿಲ್ಲ, ಯೆರೂಸಲೇವಿುಗೂ ಹೋಗುವದಿಲ್ಲ.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ - ಇದು ಕಠಿನವಾದ ಮಾತು, ಇದನ್ನು ಯಾರು ಕೇಳಾರು? ಅಂದುಕೊಂಡರು.


ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ; ಯಾಕೆ ತಿರಿಗಿ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸದೆಯೋ? ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು