Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:3 - ಕನ್ನಡ ಸತ್ಯವೇದವು J.V. (BSI)

3 ಅಲ್ಲಿ ಐದು ಮಂಟಪಗಳಿವೆ; ಇವುಗಳಲ್ಲಿ ಬಹುಮಂದಿ ರೋಗಿಗಳೂ ಕುರುಡರೂ ಕುಂಟರೂ ಮೈಒಣಗಿದವರೂ ಬಿದ್ದುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3-4 ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3-4 ಕುರುಡರು, ಕುಂಟರು, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಆ ಮಂಟಪಗಳಲ್ಲಿ ಬಿದ್ದುಕೊಳ್ಳುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೊಳದ ಬಳಿಯಲ್ಲಿದ್ದ ಮಂಟಪಗಳಲ್ಲಿ ಅನೇಕ ರೋಗಿಗಳು ಬಿದ್ದುಕೊಂಡಿರುತ್ತಿದ್ದರು. ಅವರಲ್ಲಿ ಕೆಲವರು ಕುರಡರಾಗಿದ್ದರು, ಕೆಲವರು ಕುಂಟರಾಗಿದ್ದರು, ಮತ್ತೆ ಕೆಲವರು, ಪಾರ್ಶ್ವವಾಯು ರೋಗಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವುಗಳಲ್ಲಿ ಅಸ್ವಸ್ಥರೂ ಕುರುಡರೂ ಕುಂಟರೂ ಪಾರ್ಶ್ವವಾಯು ಪೀಡಿತರೂ ಆಗಿದ್ದವರ ದೊಡ್ಡ ಸಮೂಹವೇ ಬಿದ್ದುಕೊಂಡು, ನೀರು ಉಕ್ಕುವುದನ್ನೇ ಕಾದು ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತ್ಯಾ ತಳ್ಯಾಚ್ಯಾ ಮಂಟಪಾ ವೈನಿ ಶಿಕ್ ಹೊತ್ತ್ಯಾ ಲೊಕಾಂಚೊ ತಾಂಡೊ ಪಡುನ್ ರ್‍ಹಾಯ್. ಕುಡ್ಡಿ, ಸೊಟ್ಟಿ, ವಾರ್‍ಯಾನ್‍ ಮಾರಲ್ಲಿ ಲೊಕಾ ಥೈ ಹೊತ್ತಿ. ಪಾನಿ ಹಾಲ್ತಲೆ ರಾಕಿತ್ ರ್‍ಹಾತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:3
12 ತಿಳಿವುಗಳ ಹೋಲಿಕೆ  

ಹೀಗಿರಲು ಆತನು ಅವರಿಗೆ ಪ್ರತ್ಯುತ್ತರವಾಗಿ - ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರಿಗೆ ಕಣ್ಣು ಬರುತ್ತವೆ, ಕುಂಟರಿಗೆ ಕಾಲು ಬರುತ್ತವೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರಿಗೆ ಕಿವಿ ಬರುತ್ತವೆ, ಸತ್ತವರು ಜೀವವನ್ನು ಹೊಂದುತ್ತಾರೆ, ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.


ಆಗ ಜನರು ಗುಂಪುಗುಂಪಾಗಿ ಆತನ ಬಳಿಗೆ ಬಂದು ಕುಂಟರು ಕುರುಡರು ಮೂಕರು ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ಕರತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು; ಆತನು ಅವರನ್ನು ವಾಸಿಮಾಡಿದನು.


ಮಂದೆಯನ್ನು ಕಾಯದೆ ಬಿಟ್ಟುಬಿಟ್ಟ ತರವಲ್ಲದ ಕುರುಬನ ಗತಿಯನ್ನು ಏನುಹೇಳಲಿ! ಖಡ್ಗವು ಅವನ ತೋಳಿಗೂ ಬಲಗಣ್ಣಿಗೂ ತಾಕುವದು; ಅವನ ತೋಳು ತೀರಾ ಒಣಗಿಹೋಗುವದು, ಅವನ ಬಲಗಣ್ಣು ಪೂರಾ ಮೊಬ್ಬಾಗುವದು.


ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವದು ಒಳ್ಳೇದು.


ಸಹೋದರರೇ, ಕರ್ತನು ಪ್ರತ್ಯಕ್ಷನಾಗುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂವಿುಯ ಬೆಲೆಯುಳ್ಳ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.


ಆದರೆ ಕಾಣದಿರುವದನ್ನು ನಾವು ಎದುರುನೋಡುವವರಾಗಿದ್ದರೆ ತಾಳ್ಮೆಯಿಂದ ಕಾದುಕೊಂಡಿರುವೆವು.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಲಿನ ನಿಲವುಗಳ ಹತ್ತಿರ ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.


ಬೇತೇಲಿನ ವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ - ಅವನನ್ನು ಹಿಡಿಯಿರಿ ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಯೆರೂಸಲೇವಿುನಲ್ಲಿ ಕುರೀ ಅಗಸೇಬಾಗಲಿನ ಹತ್ತಿರದಲ್ಲಿ ಒಂದು ಕೊಳವಿದೆ; ಇದಕ್ಕೆ ಇಬ್ರಿಯ ಮಾತಿನಲ್ಲಿ ಬೇತ್ಸಥಾ ಎಂದು ಹೆಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು