Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:30 - ಕನ್ನಡ ಸತ್ಯವೇದವು J.V. (BSI)

30 ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ತಂದೆ ಹೇಳಿದ್ದನ್ನು ಕೇಳಿ ನ್ಯಾಯತೀರಿಸುತ್ತೇನೆ; ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ಅಪೇಕ್ಷಿಸುವದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನಾನು ಒಬ್ಬಂಟಿಗನಾಗಿ ಏನೂ ಮಾಡಲಾರೆನು. ನಾನು ಕೇಳಿದ್ದಕ್ಕನುಸಾರವಾಗಿ ತೀರ್ಪು ಮಾಡುತ್ತೇನೆ. ಆದ್ದರಿಂದ ನನ್ನ ತೀರ್ಪು ಸರಿಯಾದದ್ದು. ಏಕೆಂದರೆ, ನಾನು ನನ್ನನ್ನು ಮೆಚ್ಚಿಸಲು ಪ್ರಯತ್ನಿಸದೆ ನನ್ನ ತಂದೆಯನ್ನು ಮೆಚ್ಚಿಸಲು ಪ್ರಯತ್ನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಮಿಯಾ ಮಾಜ್ಯಾ ಅದಿಕಾರಾನ್ ಕಾಯ್ಬಿ ಕರುಕ್ ಹೊಯ್ನಾ; ಕಸೊ ದೆವ್ ಮಾಕಾ ಸಾಂಗ್ತಾ ತಸೆ ಮಿಯಾ ಆಯ್ಕಲ್ಲ್ಯಾ ಸಾರ್ಕೆ ಮಿಯಾ ನ್ಯಾಯ್ ಕರ್‍ತಾ, ತಸೆ ಮನುನ್ ಮಾಜೊ ನಿರ್‍ನಯ್ ಸಮಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಮಾಕಾ ಪಾಜೆ ತಸೆ ಕರುಕ್ ಬಗಿನಾ ಹೊಲಾ, ಜೆ ಕೊನ್ ಮಾಕಾ ಧಾಡ್ಲ್ಯಾನಾಯ್ ತೆಕಾ ಪಾಜೆ ತಸೆ ಮಿಯಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:30
21 ತಿಳಿವುಗಳ ಹೋಲಿಕೆ  

ನನ್ನ ಚಿತ್ತದಂತೆ ನಡೆಯುವದಕ್ಕಾಗಿ ನಾನು ಬಂದಿಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದಾತನ ಚಿತ್ತವು ಏನಂದರೆ ಆತನು


ಅದಕ್ಕೆ ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡು ಮಗನು ಮಾಡುತ್ತಾನೆ ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುತ್ತಾನೆ.


ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.


ನಾನು ತಂದೆಯಲ್ಲಿದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕ್ರಿಯೆಗಳನ್ನು ನಡಿಸುತ್ತಾನೆ.


ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.


ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.


ಯಾಕಂದರೆ ಕ್ರಿಸ್ತನು ಸಹ ತನ್ನ ಸುಖವನ್ನು ನೋಡಿಕೊಳ್ಳಲಿಲ್ಲ. ದೇವರೇ, ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಬಂದವು ಎಂಬದಾಗಿ ಬರೆದಿರುವಂತೆ ಆತನಿಗೆ ಸಂಭವಿಸಿತಲ್ಲಾ.


ನನಗೆ ಮಾನಬರಬೇಕೆಂದು ನಾನು ಅಪೇಕ್ಷಿಸುವದಿಲ್ಲ; ನನಗೆ ಮಾನಬರಬೇಕೆಂದು ಅಪೇಕ್ಷಿಸುವವನು ಒಬ್ಬನಿದ್ದಾನೆ; ಆತನೇ ನ್ಯಾಯತೀರಿಸುವನು.


ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.


ಮಾಡಬೇಕೆಂದು ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ನಿನ್ನನ್ನು ಭೂಲೋಕದಲ್ಲಿ ಮಹಿಮೆಪಡಿಸಿದೆನು.


ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.


ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಆದರೆ ಅಂಥವುಗಳನ್ನು ನಡಿಸುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವದೆಂದು ಬಲ್ಲೆವು.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.


ನಿನಗೆ ವಿಧಿಸಿದ ದಂಡನೆಗಳನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು