Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:40 - ಕನ್ನಡ ಸತ್ಯವೇದವು J.V. (BSI)

40 ಆದರೂ ಜೀವ ಹೊಂದುವದಕ್ಕಾಗಿ ನನ್ನ ಬಳಿಗೆ ಬರುವದಕ್ಕೆ ನಿಮಗೆ ಮನಸ್ಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ನೀವು ಬಯಸುವ ಆ ಜೀವವನ್ನು ನನ್ನ ಬಳಿಗೆ ಬಂದು ಹೊಂದಿಕೊಳ್ಳಲು ನಿಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಅಜುನ್‍ಬಿ ತುಮ್ಕಾ ಜಿವ್ ಕಮ್ವುನ್ ಘೆವ್‍ಸಾಟ್ನಿ ಮಾಜ್ಯಾಕ್ಡೆ ಯೆವ್ಕ್ ಮನ್‍ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:40
23 ತಿಳಿವುಗಳ ಹೋಲಿಕೆ  

ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.


ತಂದೆಯು ನನಗೆ ಕೊಡುವಂಥವರೆಲ್ಲರು ನನ್ನ ಬಳಿಗೆ ಬರುವರು; ಮತ್ತು ನನ್ನ ಬಳಿಗೆ ಬರುವವನನ್ನು ನಾನು ತಳ್ಳಿಬಿಡುವದೇ ಇಲ್ಲ.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲ್ಯರು ನನಗೆ ಸಮ್ಮತಿಸಲಿಲ್ಲ.


ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?


ಅವನು ಮದುವೆಗೆ ಹೇಳಿಸಿಕೊಂಡವರನ್ನು ಕರೆಯುವದಕ್ಕೆ ತನ್ನ ಆಳುಗಳನ್ನು ಕಳುಹಿಸಲು ಬರುವದಕ್ಕೆ ಅವರಿಗೆ ಮನಸ್ಸಿರಲಿಲ್ಲ.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ನಾನು ಮನುಷ್ಯರಿಂದಾಗುವ ಮಾನವನ್ನು ಅಂಗೀಕರಿಸುವದಿಲ್ಲ.


ಕಳ್ಳನು ಕದ್ದುಕೊಳ್ಳುವದಕ್ಕೂ ಕೊಯ್ಯುವದಕ್ಕೂ ಹಾಳುಮಾಡುವದಕ್ಕೂ ಬರುತ್ತಾನೆ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು