Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:44 - ಕನ್ನಡ ಸತ್ಯವೇದವು J.V. (BSI)

44 ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ದುಸ್ರ್ಯಾನಿಕ್ನಾ ಹೊಗ್ಳುನ್ ಘೆತಲೆ ತುಮ್ಕಾ ಬರೆ ದಿಸ್ತಾ. ಖರೆ ತುಮಿ ಎಕ್ಲ್ಯಾಚ್ ದೆವಾಕ್ನಾ ಹೊಗ್ಳುನ್ ಘೆವ್ಕ್ ಮನ್ ಕರಿನ್ಯಾಶಿ, ಅಶೆ ರ್‍ಹಾತಾನಾ ತುಮಿ ಮಾಜ್ಯಾ ಕಶೆ ವಿಶ್ವಾಸ್, ಕರುಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:44
26 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರಿಂದ ಬರುವ ಮಾನಕ್ಕಿಂತ ಮನುಷ್ಯರಿಂದ ಬರುವ ಮಾನವೇ ಅವರಿಗೆ ಇಷ್ಟವಾಗಿತ್ತು.


ಆದರೆ ಒಳಗೆ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಹೃದಯದಲ್ಲಿ ಆಗುವ ಸುನ್ನತಿಯೇ ಸುನ್ನತಿ. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮ ಸಂಬಂಧಪಟ್ಟದ್ದೇ; ಇಂಥಾ ಸುನ್ನತಿಯಿದ್ದವನಿಗೆ ಬರುವ ಹೊಗಳಿಕೆಯು ದೇವರಿಂದಲೇ ಹೊರತು ಮನುಷ್ಯರಿಂದ ಬರುವದಲ್ಲ.


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರಿಗೆ ಕಾಣಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕ ಪಟ್ಟಿಗಳನ್ನು ಅಗಲಮಾಡುತ್ತಾರೆ, ಗೊಂಡೆಗಳನ್ನು ಉದ್ದಮಾಡುತ್ತಾರೆ.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಆದರೆ ಒಳ್ಳೆದನ್ನು ನಡಿಸುವ ಪ್ರತಿಯೊಬ್ಬನಿಗೆ ಪ್ರಭಾವವೂ ಮಾನವೂ ಮನಶ್ಶಾಂತಿಯೂ ಉಂಟಾಗುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು.


ನೀನು ನನ್ನ ಹೆಸರಿನದಾಗಿ ಒಂದು ಮನೆಯನ್ನು ಕಟ್ಟುವದಕ್ಕೆ ಮನಸ್ಸುಮಾಡಿದ್ದು ಒಳ್ಳೇದೇ ಸರಿ.


ನನ್ನ ಸಹೋದರರೇ, ಪ್ರಭಾವವುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ನೀವು ನನ್ನ ಮಾತನ್ನು ಗ್ರಹಿಸದೆ ಇರುವದಕ್ಕೆ ಕಾರಣವೇನು? ನನ್ನ ಬೋಧನೆಗೆ ಕಿವಿಗೊಡಲಾರದೆ ಇರುವದೇ ಕಾರಣ.


ಕೆಟ್ಟದ್ದನ್ನು ಮಾಡುವವರು ಬೆಳಕನ್ನು ಸಹಿಸುವದಿಲ್ಲ, ತಮ್ಮ ಕೃತ್ಯಗಳು ದುಷ್ಕೃತ್ಯಗಳಾಗಿ ತೋರಿಬಂದಾವೆಂದು ಬೆಳಕಿಗೆ ಬರುವದಿಲ್ಲ;


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ಅದಕ್ಕೆ ಸೌಲನು - ನಾನು ಪಾಪ ಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲ್ಯರ ಮುಂದೆಯೂ ಜನರ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು; ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವದಕ್ಕಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಬೇಡಿಕೊಳ್ಳಲು ಅವನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು.


ನಾನು ಮನುಷ್ಯರಿಂದಾಗುವ ಮಾನವನ್ನು ಅಂಗೀಕರಿಸುವದಿಲ್ಲ.


ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮಗೆ ಗೌರವವನ್ನು ಕೊಡಬೇಕೆಂದು ಹೇಳಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ ಇತರರಿಂದಾಗಲಿ ಹೊಂದಲಪೇಕ್ಷಿಸುವವರಾಗಿಲ್ಲ.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು