Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:12 - ಕನ್ನಡ ಸತ್ಯವೇದವು J.V. (BSI)

12 ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ - ವಿುಕ್ಕತುಂಡುಗಳನ್ನು ಕೂಡಿಸಿರಿ; ಇದರಲ್ಲಿ ಯಾವದೂ ವ್ಯರ್ಥವಾಗಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರೆಲ್ಲರೂ ತಿಂದು ತೃಪ್ತಿಯಾದ ಮೇಲೆ ಯೇಸು ತಮ್ಮ ಶಿಷ್ಯರಿಗೆ, “ಏನೂ ನಷ್ಟವಾಗದಂತೆ ಉಳಿದ ತುಂಡುಗಳನ್ನು ಕೂಡಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ಸಗ್ಳ್ಯಾನಿ ಪೊಟ್ಬರ್ ಜೆವ್ನ್ ಹೊಲ್ಲ್ಯಾ ತನ್ನಾ ತೆನಿ ಅಪ್ನಾಚ್ಯಾ ಶಿಸಾಕ್ನಿ, “ಹುರಲ್ಲೆ ಸಗ್ಳೆ ತುಕ್ಡೆ ಗೊಳಾ ಕರಾ, ಉಲ್ಲೆಸೆಬಿ ಅಮಿ ಹಾಳ್ ಕರ್‍ತಲೆ ನಕ್ಕೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:12
12 ತಿಳಿವುಗಳ ಹೋಲಿಕೆ  

ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ ಸ್ಥಿತಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.


ಅವರೆಲ್ಲರು ಊಟಮಾಡಿ ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.


ಅವರು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸಾರವುಳ್ಳ ಭೂವಿುಯನ್ನೂ ಸಮಸ್ತ ವಿಧವಾದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇತೋಟ, ಎಣ್ಣೇಮರಗಳ ತೋಪು, ಎಷ್ಟೋ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು ತೃಪ್ತರಾಗಿ ಕೊಬ್ಬಿ ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.


ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.


ಕೆಲಸಗಳ್ಳನು ಕೆಡುಕನಿಗೆ ತಮ್ಮ.


ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ಎಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟು ಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಸೂರೆಮಾಡಿಬಿಟ್ಟನು.


ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ - ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಮನೆವಾರ್ತೆಯವನಿದ್ದನು. ಇವನ ವಿಷಯವಾಗಿ ಯಜಮಾನನ ಬಳಿಯಲ್ಲಿ - ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ


ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು