Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:22 - ಕನ್ನಡ ಸತ್ಯವೇದವು J.V. (BSI)

22 ಮರುದಿವಸ ಸಮುದ್ರದ ಆಚೇಕಡೆಯಲ್ಲಿ ನಿಂತುಕೊಂಡಿದ್ದ ಜನರು ಯೇಸುವನ್ನು ಹುಡುಕುತ್ತಿದ್ದರು; ಇಲ್ಲಿ ಒಂದೇ ಹಡಗು ಇದ್ದ ಹೊರತು ಬೇರೆ ದೋಣಿಯು ಇರಲಿಲ್ಲವೆಂದೂ ಶಿಷ್ಯರು ಮಾತ್ರ ಹೊರಟು ಹೋದದ್ದಲ್ಲದೆ ಯೇಸು ತನ್ನ ಶಿಷ್ಯರ ಸಂಗಡ ಆ ಹಡಗನ್ನು ಹತ್ತಲಿಲ್ಲವೆಂದೂ ಅವರಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೆರೆದಿದ್ದ ಜನರು ಮಾರನೆಯ ದಿನವೂ ಸರೋವರದ ಆಚೆಕಡೆಯೇ ಉಳಿದಿದ್ದರು. ಹಿಂದಿನ ದಿನ ಅಲ್ಲಿ ಒಂದೇ ಒಂದು ದೋಣಿ ಇದ್ದುದನ್ನು ಅವರು ನೋಡಿದ್ದರು. ಯೇಸು ಸ್ವಾಮಿ ಶಿಷ್ಯರೊಡನೆ ದೋಣಿಯನ್ನು ಹತ್ತಲಿಲ್ಲವಾದ್ದರಿಂದ ಶಿಷ್ಯರು ಮಾತ್ರ ಹೊರಟುಹೋಗಿದ್ದಾರೆಂದು ಅವರಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮರುದಿನವಾಯಿತು. ಕೆಲವು ಜನರು ಸರೋವರದ ಮತ್ತೊಂದು ಕಡೆಯಲ್ಲಿ ಉಳಿದುಕೊಂಡಿದ್ದರು. ಯೇಸು ತನ್ನ ಶಿಷ್ಯರೊಂದಿಗೆ ದೋಣಿಯಲ್ಲಿ ಹೋಗಲಿಲ್ಲ ಎಂಬುದು ಈ ಜನರಿಗೆ ತಿಳಿದಿತ್ತು. ಯೇಸುವಿನ ಶಿಷ್ಯರು ಮಾತ್ರ ದೋಣಿಯಲ್ಲಿ ಹೋದರೆಂಬುದೂ ಮತ್ತು ಅದೊಂದು ದೋಣಿ ಮಾತ್ರ ಅಲ್ಲಿತ್ತೆಂಬುದೂ ಅವರಿಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮರುದಿನ ಅಲ್ಲಿ ಒಂದೇ ದೋಣಿಯ ಹೊರತು ಬೇರೆ ಇರಲಿಲ್ಲವೆಂದೂ ಯೇಸುವಿನ ಶಿಷ್ಯರು ಮಾತ್ರ ಆ ದೋಣಿಯಲ್ಲಿ ಹೋದರೆಂದೂ ಯೇಸು ತಮ್ಮ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಸರೋವರದ ಆಚೆಯಲ್ಲಿ ನಿಂತಿದ್ದ ಜನರು ಅರಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ದುಸ್ರೆಂದಿಸಿ ತ್ಯಾ ದಂಡೆಕ್ ಹೊತ್ತ್ಯಾ ಲೊಕಾನಿ ಸಮುಂದರಾತ್ ಎಕುಚ್ ಎಕ್ ಢೊನ್ ಹೊತ್ತಿ ಬಗಟ್ಲ್ಯಾನಿ, ಜೆಜು ಶಿಸಾಂಚ್ಯಾ ವಾಂಗ್ಡಾ ಢೊನಿತ್ ಚೆಡುಕ್ ನತ್ತೊ, ಶಿಸಾ ಎವ್ಡೆಚ್ ಥೈತ್ನಾ ಫಿಡೆ ಗೆಲ್ಲಿ. ಕಶ್ಯಾಕ್ ಮಟ್ಲ್ಯಾರ್ ತೆನಿ ಜೆಜುಕ್ ಫಾಟಿ ಸೊಡುನ್ ಗೆಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:22
4 ತಿಳಿವುಗಳ ಹೋಲಿಕೆ  

ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.


ಬಹು ಜನರ ಗುಂಪು ರೋಗಿಗಳಲ್ಲಿ ಆತನು ನಡಿಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಆತನ ಹಿಂದೆ ಹೋಗುತ್ತಿತ್ತು.


ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು