Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:28 - ಕನ್ನಡ ಸತ್ಯವೇದವು J.V. (BSI)

28 ಅವರು - ದೇವರಿಗೆ ಮೆಚ್ಚಿಕೆಯಾದ ಕೆಲಸಗಳನ್ನು ನಾವು ನಡಿಸಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಆ ಜನರು, “ದೇವರು ಮೆಚ್ಚುವ ಕಾರ್ಯಗಳನ್ನು ನಾವು ಮಾಡಬೇಕಾದರೆ, ಏನುಮಾಡಬೇಕು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಜನರು ಯೇಸುವಿಗೆ, “ನಾವು ಯಾವ ಕಾರ್ಯಗಳನ್ನು ಮಾಡಬೇಕೆಂದು ದೇವರು ಬಯಸುತ್ತಾನೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಅವರು ಯೇಸುವಿಗೆ, “ನಾವು ದೇವರ ಕಾರ್ಯವನ್ನು ಮಾಡಬೇಕಾದರೆ ಏನು ಮಾಡಬೇಕು?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ಲೊಕಾನಿ ತೆನಿ, “ದೆವಾಕ್ ಪಾಜೆ ತಶೆ ಕರುಚೆ ಮಟ್ಲ್ಯಾರ್ ಅಮಿ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:28
11 ತಿಳಿವುಗಳ ಹೋಲಿಕೆ  

ಮತ್ತು ಅವರನ್ನು ಹೊರಗೆ ಕರಕೊಂಡು ಬಂದು - ಸ್ವಾವಿುಗಳೇ, ನಾನು ರಕ್ಷಣೆಹೊಂದುವದಕ್ಕೆ ಏನು ಮಾಡಬೇಕೆಂದು ಕೇಳಲು


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವದಕ್ಕಾಗಿ - ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಕೇಳಲು


ಆಗ ಒಬ್ಬನು ಬಂದು ಆತನನ್ನು - ಬೋಧಕನೇ, ನಾನು ನಿತ್ಯಜೀವವನ್ನು ಪಡೆಯಬೇಕಾದರೆ ಏನು ಒಳ್ಳೇ ಕಾರ್ಯವನ್ನು ಮಾಡಬೇಕು ಎಂದು ಕೇಳಲಾಗಿ


ಇದನ್ನು ಅವರು ಕೇಳಿ ಹೃದಯದಲ್ಲಿ ಅಲಗುನೆಟ್ಟಂತಾಗಿ ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ - ಸಹೋದರರೇ, ನಾವೇನು ಮಾಡಬೇಕು ಎಂದು ಕೇಳಲು


ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು ಎಂದು ಹೇಳಿದಿರಿ.


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು - ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು ಎಂಬದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಯೇಸು - ದೇವರು ಮೆಚ್ಚುವ ಕೆಲಸ ಯಾವದಂದರೆ ಆತನು ಕಳುಹಿಸಿಕೊಟ್ಟವನನ್ನು ನೀವು ನಂಬುವದೇ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು