Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:30 - ಕನ್ನಡ ಸತ್ಯವೇದವು J.V. (BSI)

30 ಅವರು ಆತನನ್ನು - ಹಾಗಾದರೆ ನಾವು ನೋಡಿ ನಿನ್ನ ಮಾತನ್ನು ನಂಬುವಂತೆ ಏನು ಸೂಚಕಕಾರ್ಯ ಮಾಡುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಜನರು, “ದೇವರಿಂದ ಕಳುಹಿಸಲ್ಪಟ್ಟಾತನು ನೀನೇ ಎಂಬುದನ್ನು ನಿರೂಪಿಸುವುದಕ್ಕಾಗಿ ನೀನು ಯಾವ ಸೂಚಕಕಾರ್ಯವನ್ನು ಮಾಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ನಾವು ನೋಡಿ ನಿಮ್ಮನ್ನು ನಂಬುವಂತೆ ಯಾವ ಸೂಚಕಕಾರ್ಯವನ್ನು ಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ಲೊಕಾ ತೆನಿ,“ಅಮಿ ಬಗುನ್ ತುಜೆ ವರ್ತಿ ವಿಶ್ವಾಸ್ ಕರಿ ಸರ್ಕೆ ಕಾಯ್ ಅಜಾಪ್ ಅಮ್ಕಾ ತಿಯಾ ಕರುನ್ ದಾಕ್ವುತೆಯ್? ಕಾಯ್ ಕಾಮ್ ಕರುನ್ ದಾಕ್ವುತೆ ತಿಯಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:30
22 ತಿಳಿವುಗಳ ಹೋಲಿಕೆ  

ಆತನು ಅವರ ಮುಂದೆ ಅಷ್ಟು ಸೂಚಕಕಾರ್ಯಗಳನ್ನು ಮಾಡಿದರೂ ಅವರು ಆತನನ್ನು ನಂಬಲಿಲ್ಲ.


ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;


ಮಾಡಿದರೆ ನನ್ನ ಮಾತನ್ನು ನಂಬದೆ ಇದ್ದರೂ ಆ ಕ್ರಿಯೆಗಳ ಸಾಕ್ಷಿಯನ್ನಾದರೂ ನಂಬಿರಿ; ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ ತಂದೆಯಲ್ಲಿ ನಾನು ಇದ್ದೇನೆಂತಲೂ ನೀವು ತಿಳುಕೊಂಡು ಮನನಮಾಡಿಕೊಳ್ಳುವಿರಿ ಅಂದನು.


ಆದರೆ ನೀವು ನನ್ನನ್ನು ನೋಡಿದ್ದರೂ ನಂಬದೆ ಇದ್ದೀರಿ ಎಂದು ನಿಮಗೆ ಹೇಳಿದೆನಲ್ಲವೇ.


ಯೆಹೂದ್ಯರು ಆತನನ್ನು - ನಿನಗೆ ಇದನ್ನೆಲ್ಲಾ ಮಾಡುವ ಅಧಿಕಾರ ಉಂಟೆಂಬದಕ್ಕೆ ಏನು ಸೂಚಕ ಕಾರ್ಯವನ್ನು ತೋರಿಸುತ್ತೀ? ಎಂದು ಕೇಳಿದ್ದಕ್ಕೆ


ಮತ್ತು ದೇವರು ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಾನಾ ವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ಪವಿತ್ರಾತ್ಮವರಗಳನ್ನು ತನ್ನ ಚಿತ್ತಾನುಸಾರವಾಗಿ ಅವರಿಗೆ ಅನುಗ್ರಹಿಸಿ ಅವರ ಮಾತಿಗೆ ಸಾಕ್ಷಿಕೊಡುತ್ತಿದ್ದನು.


ಇಸ್ರಾಯೇಲ್ಯರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದುಬಂದರೆ ನಾವು ನೋಡಿ ನಂಬೇವು ಎಂದು ತಮ್ಮತಮ್ಮೊಳಗೆ ಹಾಸ್ಯದಿಂದ ಮಾತಾಡುತ್ತಿದ್ದರು. ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.


ತರುವಾಯ ಫರಿಸಾಯರು ಹೊರಟು ಬಂದು ಆತನ ಕೂಡ ತರ್ಕಮಾಡುತ್ತಾ ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳುತ್ತಿರಲು ಆತನು ತನ್ನ ಆತ್ಮದಲ್ಲಿ ನೊಂದು ನಿಟ್ಟುಸುರುಬಿಟ್ಟು -


ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


ಅವನು ಅದನ್ನು ಹಿಂದೆಗೆಯಲಾರದವನಾದನು. ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು; ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.


ಇದಲ್ಲದೆ ಅವನು - ನನ್ನ ಮಾತು ಯೆಹೋವನದೆಂಬದಕ್ಕೆ ವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದು ಹೋಗುವದೇ ಗುರುತಾಗಿರುವದು ಎಂದು ಹೇಳಿದನು.


ಆಗ ಯೆಹೋವನು ಅವನಿಗೆ - ಅವರು ನಿನ್ನನ್ನು ನಂಬದೆ ಮೊದಲನೆಯ ಮಹತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.


ಫರೋಹನು ನಿಮಗೆ - ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕೆಂದು ಹೇಳಿದರೆ ಮೋಶೆಯು ಆರೋನನಿಗೆ - ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಬೀಸಾಡು ಎಂದು ಹೇಳಬೇಕು, ಅದು ಸರ್ಪವಾಗುವದು ಎಂದು ಆಜ್ಞಾಪಿಸಿದನು.


ಬಹು ಜನರ ಗುಂಪು ರೋಗಿಗಳಲ್ಲಿ ಆತನು ನಡಿಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಆತನ ಹಿಂದೆ ಹೋಗುತ್ತಿತ್ತು.


ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ - ಲೋಕಕ್ಕೆ ಬರಬೇಕಾದ ಪ್ರವಾದಿ ಈತನೇ ನಿಜ ಎಂದು ಹೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು