Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:37 - ಕನ್ನಡ ಸತ್ಯವೇದವು J.V. (BSI)

37 ತಂದೆಯು ನನಗೆ ಕೊಡುವಂಥವರೆಲ್ಲರು ನನ್ನ ಬಳಿಗೆ ಬರುವರು; ಮತ್ತು ನನ್ನ ಬಳಿಗೆ ಬರುವವನನ್ನು ನಾನು ತಳ್ಳಿಬಿಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಮಾಜ್ಯಾ ಬಾಬಾನ್ ಮಾಜೆ ಮನುನ್ ಮಾಕಾ ದಿಲ್ಲೆ ಸಗ್ಳಿ ಲೊಕಾ ಮಾಜ್ಯಾಕ್ಡೆ ಯೆತ್ಯಾತ್, ಮಾಜ್ಯಾಕ್ಡೆ ಯೆಲ್ಲ್ಯಾಕ್ನಿ ಮಿಯಾ ಕನ್ನಾಬಿ ಢಕ್ಲುನ್ ಘಾಲಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:37
30 ತಿಳಿವುಗಳ ಹೋಲಿಕೆ  

ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.


ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ನಾನು ಕೆಡಗೊಡಿಸದೆ ಅವನನ್ನು ಕಡೇದಿನದಲ್ಲಿ ಎಬ್ಬಿಸಬೇಕೆಂಬದೇ. ಮಗನನ್ನು ನೋಡಿ ಆತನನ್ನು ನಂಬುವ ಪ್ರತಿಯೊಬ್ಬನಿಗೆ


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ.


ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘಶಾಂತಿಯನ್ನು ತೋರ್ಪಡಿಸಿದನು.


ಜಜ್ಜಿದ ದಂಟನ್ನು ಮುರಿದು ಹಾಕದೆ ಕಳೆಗುಂದಿದ ದೀಪವನ್ನು ನಂದಿಸದೆ ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.


ಮತ್ತು ಆತನು - ತಂದೆಯ ಅನುಗ್ರಹವಿಲ್ಲದೆ ಯಾರೂ ನನ್ನ ಬಳಿಗೆ ಬರಲಾರರು ಎಂಬದನ್ನು ನಾನು ನಿಮಗೆ ಅದರ ದೆಸೆಯಿಂದಲೇ ಹೇಳಿದೆನು ಅಂದನು.


ನಾನು ಭೂವಿುಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, ನೀನಂತು ಹೆದರಬೇಡ,


ಅಪರಾಧಗಳು ಹೆಚ್ಚಾಗಿ ಕಂಡುಬರುವ ಹಾಗೆ ಧರ್ಮಶಾಸ್ತ್ರವು ಮಧ್ಯೆ ಬಂತು. ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.


ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು.


ಇನ್ನು ನಾನು ಲೋಕದಲ್ಲಿ ಇರುವದಿಲ್ಲ, ಇವರು ಲೋಕದಲ್ಲಿ ಇರುತ್ತಾರೆ, ನಾನು ನಿನ್ನ ಬಳಿಗೆ ಬರುತ್ತೇನೆ. ಪವಿತ್ರನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಯಬೇಕು.


ಈ ಮಾತಿಗೆ ಅವರು - ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನಮಗೆ ಉಪದೇಶಮಾಡುತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು