Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:38 - ಕನ್ನಡ ಸತ್ಯವೇದವು J.V. (BSI)

38 ನನ್ನ ಚಿತ್ತದಂತೆ ನಡೆಯುವದಕ್ಕಾಗಿ ನಾನು ಬಂದಿಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದಾತನ ಚಿತ್ತವು ಏನಂದರೆ ಆತನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಾನು ಪರಲೋಕದಿಂದ ಇಳಿದು ಬಂದದ್ದು ದೇವರ ಚಿತ್ತಕ್ಕನುಸಾರವಾಗಿ ಮಾಡುವುದಕ್ಕಾಗಿಯೇ ಹೊರತು ನನ್ನ ಚಿತ್ತಕ್ಕನುಸಾರವಾಗಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಕಶ್ಯಾಕ್ ಮಟ್ಲ್ಯಾರ್ ಮಿಯಾ ಸರ್‍ಗಾ ವೈನಾ ಮಾಜ್ಯಾ ಮನಾಚ್ಯಾ ಸರ್ಕೆ ಕರುಕ್ ಯೆವ್ಕ್ ನಾ, ಮಾಕಾ ಧಾಡುನ್ ದಿಲ್ಯಾಚ್ಯಾ ಮನಾ ಸರ್ಕೆ ಕರುಕ್ ಮನುನ್ ಮಿಯಾ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:38
19 ತಿಳಿವುಗಳ ಹೋಲಿಕೆ  

ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ತಂದೆ ಹೇಳಿದ್ದನ್ನು ಕೇಳಿ ನ್ಯಾಯತೀರಿಸುತ್ತೇನೆ; ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ಅಪೇಕ್ಷಿಸುವದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.


ಮೇಲಣಿಂದ ಬರುವವನು ಎಲ್ಲರ ಮೇಲೆ ಇದ್ದಾನೆ; ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕದ ಮಾತನ್ನು ಆಡುತ್ತಾನೆ; ಪರಲೋಕದಿಂದ ಬರುವವನು ಎಲ್ಲರ ಮೇಲೆ ಇದ್ದಾನೆ.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ದೇವರು ಕೊಡುವ ಆ ರೊಟ್ಟಿ ಯಾವದಂದರೆ ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದೇ ಎಂದು ಹೇಳಿದನು.


ಪರಲೋಕದಿಂದ ಇಳಿದುಬಂದವನೇ ಅಂದರೆ ಮನುಷ್ಯಕುಮಾರನೇ ಹೊರತು ಮತ್ತಾರೂ ಪರಲೋಕಕ್ಕೆ ಏರಿಹೋದವನಲ್ಲ.


ಹೀಗೆ ಆತನು ಮಗನಾಗಿದ್ದರೂ ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.


ಯಾಕಂದರೆ ಕ್ರಿಸ್ತನು ಸಹ ತನ್ನ ಸುಖವನ್ನು ನೋಡಿಕೊಳ್ಳಲಿಲ್ಲ. ದೇವರೇ, ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಬಂದವು ಎಂಬದಾಗಿ ಬರೆದಿರುವಂತೆ ಆತನಿಗೆ ಸಂಭವಿಸಿತಲ್ಲಾ.


(ಏರಿಹೋದನೆಂದು ಹೇಳಿದ್ದರಲ್ಲಿ ಭೂವಿುಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ.


ಅದಕ್ಕೆ ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡು ಮಗನು ಮಾಡುತ್ತಾನೆ ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುತ್ತಾನೆ.


ಯೇಸು - ದೇವರು ಮೆಚ್ಚುವ ಕೆಲಸ ಯಾವದಂದರೆ ಆತನು ಕಳುಹಿಸಿಕೊಟ್ಟವನನ್ನು ನೀವು ನಂಬುವದೇ ಅಂದನು.


ಇವನ ತಂದೆತಾಯಿಗಳನ್ನು ನಾವು ಬಲ್ಲೆವಲ್ಲವೇ. ಈಗ ಇವನು ಪರಲೋಕದಿಂದ ಇಳಿದುಬಂದಿದ್ದೇನೆಂದು ಹೇಳುವದು ಹೇಗೆ? ಅಂದರು.


ಜೀವ ಸ್ವರೂಪನಾದ ತಂದೆಯು ನನ್ನನ್ನು ಕಳುಹಿಸಿಕೊಟ್ಟಿರಲಾಗಿ ನಾನು ತಂದೆಯಿಂದ ಜೀವಿಸುತ್ತೇನೆ; ಅದರಂತೆ ನನ್ನನ್ನು ತಿನ್ನುವವನೇ ನನ್ನಿಂದ ಜೀವಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು