ಯೋಹಾನ 6:44 - ಕನ್ನಡ ಸತ್ಯವೇದವು J.V. (BSI)44 ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಎಳೆದ ಹೊರತು ಯಾವನೂ ನನ್ನ ಬಳಿಗೆ ಬರಲಾರನು; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 “ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಬಾಬಾನ್ ಮಾಜ್ಯಾ ಕಡೆ ಯೆಯ್ ಸರ್ಕೆ ಕರ್ಲ್ಯಾ ಶಿವಾಯ್ ಕೊನಾಕ್ಬಿ ಮಾಜಾಕ್ಡೆ ಯೆವ್ಕ್ ಹೊಯ್ನಾ: ಅನಿ ಮಿಯಾ ತೆಕಾ ಆಕ್ರಿಚ್ಯಾ ದಿಸಿ ಝಿತ್ತೆ ಕರುನ್ ಉಟ್ವುತಾ. ಅಧ್ಯಾಯವನ್ನು ನೋಡಿ |