ಯೋಹಾನ 6:51 - ಕನ್ನಡ ಸತ್ಯವೇದವು J.V. (BSI)51 ಪರಲೋಕದಿಂದ ಇಳಿದುಬರುವ ಜೀವವುಳ್ಳ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾಕಾಲ ಬದುಕುವನು. ಮತ್ತು ನಾನು ಕೊಡುವ ರೊಟ್ಟಿ ನನ್ನ ಮಾಂಸವೇ; ಅದನ್ನು ಲೋಕದ ಜೀವಕ್ಕೋಸ್ಕರ ಕೊಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಮಿಯಾ ಸರ್ಗಾವೈನಾ, ಉತ್ರುನ್ ಯೆಲ್ಲಿ ಝಿತ್ತಿ ಭಾಕ್ರಿ, ಹಿ ಭಾಕ್ರಿ ತುಮಿ ಖಾಲ್ಯಾಶಿ ತರ್, ತುಮ್ಕಾ ಮರಾನುಚ್ ನಾ, ಅನಿ ಹ್ಯಾ ಜಗಾಕ್ ಜಿವ್ ದಿವ್‍ಸಾಟಿ ಮನುನ್ ಮಿಯಾ ತುಮ್ಕಾ ದಿತಲಿ ಭಾಕ್ರಿ ಮಾಜೆ ಶರಿರ್, ಜಗ್ ಝಿತ್ತೊ ರ್‍ಹಾವ್ಕ್ ಪಾಜೆ ಮನುನ್ ತೆಚ್ಯಾ ಸಾಟ್ನಿ ಮಿಯಾ ದಿತಾ. ಅಧ್ಯಾಯವನ್ನು ನೋಡಿ |