Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:6 - ಕನ್ನಡ ಸತ್ಯವೇದವು J.V. (BSI)

6 ತಾನು ಮಾಡಬೇಕೆಂದಿದ್ದದ್ದು ತನಗೆ ತಿಳಿದಿದ್ದರೂ ಅವನನ್ನು ಪರೀಕ್ಷಿಸುವದಕ್ಕೆ ಈ ಮಾತನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ ಅವರು ಹಾಗೆ ಹೇಳಿದರು. ಏಕೆಂದರೆ, ತಾವು ಮಾಡಲಿರುವುದು ಅವರಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 (ಫಿಲಿಪ್ಪನನ್ನು ಪರೀಕ್ಷಿಸುವುದಕ್ಕಾಗಿ ಆತನು ಈ ಪ್ರಶ್ನೆಯನ್ನು ಕೇಳಿದನು. ತಾನು ಮಾಡಲಿದ್ದ ಕಾರ್ಯ ಯೇಸುವಿಗೆ ಮೊದಲೇ ತಿಳಿದಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನನ್ನು ಪರೀಕ್ಷಿಸುವುದಕ್ಕಾಗಿ ಯೇಸು ಇದನ್ನು ಹೇಳಿದರು. ಏಕೆಂದರೆ ತಾನು ಮಾಡಲಿರುವುದು ಏನೆಂದು ಯೇಸುವಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಫಿಲಿಪಾಚಿ ಪರಿಕ್ಷಾ ಕರುಕ್ ತೆನಿ ಅಶೆ ಮಟ್ಲ್ಯಾನ್ ತೊ ಕಾಯ್ ಕರ್‍ತಾ ಮನುನ್ ಜೆಜುಕ್ ಗೊತ್ತ್ ಹೊತ್ತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:6
8 ತಿಳಿವುಗಳ ಹೋಲಿಕೆ  

ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.


ಆದದರಿಂದ ಅವನ ದೇಶದಲ್ಲುಂಟಾದ ಅದ್ಭುತದ ವಿಷಯವನ್ನು ವಿಚಾರಿಸುವದಕ್ಕಾಗಿ ಬಾಬೆಲಿನ ಪ್ರಭುಗಳ ರಾಯಭಾರಿಗಳು ಅವನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವದಕ್ಕೂ ಅವನ ಸರ್ವಾಂತರ್ಯವನ್ನು ತಿಳುಕೊಳ್ಳುವದಕ್ಕೂ ಅವನನ್ನು ಕೈಬಿಟ್ಟನು.


ನಿಮ್ಮ ದೇವರಾದ ಯೆಹೋವನು - ಇವರು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ ಎಂಬದನ್ನು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ಲೇವಿಕುಲದ ವಿಷಯದಲ್ಲಿ ಹೀಗಂದನು - [ಯೆಹೋವನೇ,] ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಕ್ರಿಸ್ತನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬದು ನಿಮ್ಮನ್ನು ಕುರಿತು ನಿಮಗೆ ಚೆನ್ನಾಗಿ ತಿಳಿಯುವದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರೇ.


ನಿನ್ನ ಕೃತ್ಯಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು