Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:60 - ಕನ್ನಡ ಸತ್ಯವೇದವು J.V. (BSI)

60 ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ - ಇದು ಕಠಿನವಾದ ಮಾತು, ಇದನ್ನು ಯಾರು ಕೇಳಾರು? ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಇದನ್ನು ಕೇಳಿದ ಆತನ ಶಿಷ್ಯರಲ್ಲಿ ಅನೇಕರು, “ಈ ಉಪದೇಶವು ಕಠಿಣವಾಗಿದೆ. ಇದನ್ನು ಯಾರು ಗ್ರಹಿಸಿಕೊಳ್ಳಬಲ್ಲರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಯೇಸುವಿನ ಶಿಷ್ಯರಲ್ಲಿ ಅನೇಕರು ಈ ಮಾತುಗಳನ್ನು ಕೇಳಿ, “ಇದು ಕಠಿಣವಾದ ಮಾತು. ಇದನ್ನು ಯಾರು ಪಾಲಿಸುವರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

60 ಹೆ ಅಯ್ಕಲ್ಲೆ ಸುಮಾರ್ ತೆಚೆ ವಾಂಗ್ಡಿ “ಹೆ ಶಿಕಾಪ್ ಲೈ ಕಟಿನ್, ಹೆ ಸಗ್ಳೆ ಕೊನ್ ಆಯಿಕ್ತಾ” ಮನುಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:60
12 ತಿಳಿವುಗಳ ಹೋಲಿಕೆ  

ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂಜರಿದು ಆತನ ಕೂಡ ಸಂಚಾರಮಾಡುವದನ್ನು ಬಿಟ್ಟರು.


ನೀವು ನನ್ನ ಮಾತನ್ನು ಗ್ರಹಿಸದೆ ಇರುವದಕ್ಕೆ ಕಾರಣವೇನು? ನನ್ನ ಬೋಧನೆಗೆ ಕಿವಿಗೊಡಲಾರದೆ ಇರುವದೇ ಕಾರಣ.


ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ;


ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು ಎಂದು ಹೇಳಿದನು.


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಬರೆಯುವಾಗ ಹೀಗೆ ಬೋಧಿಸಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ಮಾತುಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಹೇಗೆ ನಮಗಿರುವ ವಿುಕ್ಕಾದ ಗ್ರಂಥಗಳಿಗೆ ತಪ್ಪಾದ ಅರ್ಥಮಾಡಿಕೊಂಡಿದ್ದಾರೋ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.


ಈ ವಿಷಯದಲ್ಲಿ ನಾವು ಹೇಳಬೇಕಾದ ಮಾತು ಬಹಳ ಉಂಟು, ಆದರೆ ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟವಾಗಿದೆ.


ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು.


ಆಗ ಯೆಹೂದ್ಯರು - ಇವನು ತನ್ನ ಮಾಂಸವನ್ನು ನಮಗೆ ಹೇಗೆ ತಿನ್ನುವದಕ್ಕೆ ಕೊಟ್ಟಾನು ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡುತ್ತಿರಲು


ಆದರೆ ನಿಮ್ಮಲ್ಲಿ ಕೆಲವರು ನಂಬದವರಾಗಿದ್ದಾರೆ ಅಂದನು. ನಂಬದವರು ಇಂಥವರು, ತನ್ನನ್ನು ಹಿಡುಕೊಡುವವನು ಇಂಥವನು ಎಂಬದು ಯೇಸುವಿಗೆ ಮೊದಲಿನಿಂದ ತಿಳಿದಿತ್ತು.


ಆತನ ತಮ್ಮಂದಿರು ಆತನಿಗೆ - ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು