Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:69 - ಕನ್ನಡ ಸತ್ಯವೇದವು J.V. (BSI)

69 ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

69 ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

69 ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

69 ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

69 ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

69 ಅನಿ ಅತ್ತಾ ಅಮ್ಕಾ ತಿಯಾ ದೆವಾಕ್ನಾ ಯೆಲ್ಲೊ ಪವಿತ್ರ್ ಮನುನ್ ಕಳ್ಳಾ ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:69
18 ತಿಳಿವುಗಳ ಹೋಲಿಕೆ  

ಆಕೆ - ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಂಬಿದ್ದೇನೆ ಅಂದಳು.


ಆತನು ಅವರನ್ನು - ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ ಎಂದು ಕೇಳಲಾಗಿ ಪೇತ್ರನು - ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು.


ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ? ಎಂದು ಕೇಳಲಾಗಿ ಪೇತ್ರನು - ನೀನು ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದದ್ದು. ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ,


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ತೋಮನು ಆತನಿಗೆ - ನನ್ನ ಸ್ವಾಮೀ, ನನ್ನ ದೇವರು! ಎಂದು ಹೇಳಿದನು.


ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡುಕೊಂಡು ಅವನಿಗೆ - ಮೆಸ್ಸೀಯನು ನಮಗೆ ಸಿಕ್ಕಿದನು ಎಂದು ಹೇಳಿ


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.


ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು;


ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾದ ಸುವಾರ್ತೆಯ ಪ್ರಾರಂಭವು.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?


ನಾವೆಲ್ಲರು ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯವನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯೆಂಬ ಪ್ರಮಾಣವನ್ನು ಮುಟ್ಟುವ ತನಕ


ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ; ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು