Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:7 - ಕನ್ನಡ ಸತ್ಯವೇದವು J.V. (BSI)

7 ಅದಕ್ಕೆ ಫಿಲಿಪ್ಪನು - ಒಬ್ಬೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೆ ಇನ್ನೂರು ಹಣದ ರೊಟ್ಟಿಯಾದರೂ ಸಾಲದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಫಿಲಿಪ್ಪನು, “ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ ಬೇಕು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಫಿಲಿಪ್ಪನು ಯೇಸುವಿಗೆ, “ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಫಿಲಿಪಾನ್ ಜವಾಬ್ ದಿಲ್ಲ್ಯಾನ್, “ಹಿತ್ತೆ ಹೊತ್ತ್ಯಾ ಹರಿ ಎಕ್ಲ್ಯಾಕ್ನಿ ಉಲ್ಲೆ-ಉಲ್ಲೆಚ್ ಮಟ್ಲ್ಯಾರ್‍ಬಿ ಭಾಕ್ರಿಯಾ ಇಕಾತ್ ಘೆವ್ಕ್ ದೊನ್ಸೆ ಚಾಂದಿಚೆ ಪೈಸೆ ಲಾಗ್ತ್ಯಾತ್” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:7
10 ತಿಳಿವುಗಳ ಹೋಲಿಕೆ  

ನೀವೇ ಅವರಿಗೆ ಊಟಕ್ಕೆ ಕೊಡಿರಿ ಎಂದು ಉತ್ತರಕೊಟ್ಟನು. ಅದಕ್ಕವರು - ನಾವು ಹೋಗಿ ಇನ್ನೂರು ಹಣಕ್ಕೆ ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟಕ್ಕೆ ಕೊಡಬೇಕೋ? ಎಂದು ಕೇಳಲು ಆತನು -


ಯಾಕೆ ಈ ತೈಲವನ್ನು ಮುನ್ನೂರು ಹಣಕ್ಕೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.


ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.


ಅದಕ್ಕೆ ಅವನು - ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ ಅಂದನು. ಎಲೀಷನು ಅವನಿಗೆ - ಇರಲಿ, ಕೊಡು; ಅವರು ಊಟ ಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಮರುದಿನ ಯೇಸು ಗಲಿಲಾಯಕ್ಕೆ ಹೊರಟುಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡುಕೊಂಡು - ನನ್ನನ್ನು ಹಿಂಬಾಲಿಸು ಅಂದನು.


ಈ ಫಿಲಿಪ್ಪನು ಬೇತ್ಸಾಯಿದದವನು, ಅಂದರೆ ಅಂದ್ರೆಯ ಪೇತ್ರರ ಊರಿನವನು.


ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು.


ನತಾನಯೇಲನು - ಒಳ್ಳೇದೇನಾದರೂ ನಜರೇತಿನಿಂದ ಬರುವದುಂಟೇ? ಅಂದಾಗ ಫಿಲಿಪ್ಪನು - ಬಂದು ನೋಡು ಅಂದನು.


ನತಾನಯೇಲನು - ನನ್ನನ್ನು ನೀನು ಹೇಗೆ ಬಲ್ಲೆ? ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು - ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರದ ಮರದ ಕೆಳಗೆ ಇದ್ದಾಗ ನಿನ್ನನ್ನು ನೋಡಿದೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು