Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:9 - ಕನ್ನಡ ಸತ್ಯವೇದವು J.V. (BSI)

9 ಇಲ್ಲಿರುವ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಮೀನುಗಳೂ ಅವೆ; ಆದರೆ ಇಷ್ಟು ಜನರಿಗೆ ಅವು ಯಾತಕ್ಕಾದಾವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತದೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಂದ್ರೆಯನು, “ಇಲ್ಲಿರುವ ಒಬ್ಬ ಹುಡುಗನ ಬಳಿ ಜವೆಗೋಧಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಈ ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೇಸುವಿಗೆ, “ಇಲ್ಲಿ ಒಬ್ಬ ಹುಡುಗನ ಬಳಿ ಐದು ಜವೆಗೋಧಿಯ ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಅಷ್ಟೊಂದು ಜನರಿಗೆ ಇವು ಹೇಗೆ ಸಾಕಾಗುತ್ತವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹಿತ್ತೆ ಎಕ್ ಪೊರಾಕ್ಡೆ ಘಂವಾಚ್ಯಾ ಪಾಂಚ್ ಭಾಕ್ರಿಯಾ, ಅನಿ ದೊನ್ ಮಾಸೊಳ್ಯಾ ಹಾತ್, ಖರೆ ತ್ಯಾ ಹ್ಯಾ ಎವ್ಡ್ಯಾ ಸಗ್ಳ್ಯಾ ಲೊಕಾಕ್ನಿ ಪಾವಿನ್ಯಾತ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:9
24 ತಿಳಿವುಗಳ ಹೋಲಿಕೆ  

ಆತನು - ನೀವೇ ಅವರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕವರು - ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ; ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೋ? ಅಂದರು.


ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿಕೊಂಡು ಬನ್ನಿ ಅಂದನು. ಅವರು ತಿಳುಕೊಂಡು ಬಂದು - ಐದು ರೊಟ್ಟಿ ಎರಡು ಮೀನು ಅಂದರು.


ಅದಕ್ಕವರು - ನಮಗೆ ಇಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಮತ್ತೇನೂ ಇಲ್ಲ ಅನ್ನಲಾಗಿ


ಅವರು ಆತನಿಗೆ ವಿರೋಧವಾಗಿ ಅಂದದ್ದೇನಂದರೆ - ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?


ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ನೆನಪಿಲ್ಲವೋ? ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿಸಿದಾಗ ಎಷ್ಟು ಪುಟ್ಟಿ ತುಂಬಿಟ್ಟಿರಿ?


ನಾನು ಆ ಐದು ರೊಟ್ಟಿಗಳನ್ನು ಮುರಿದು ಐದುಸಾವಿರ ಜನರಿಗೆ ಹಂಚಿಸಿದಾಗ ತುಂಡು ತುಂಬಿದ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ ಎಂದು ಕೇಳಿದ್ದಕ್ಕೆ ಅವರು - ಹನ್ನೆರಡು ಪುಟ್ಟಿ ಅಂದರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಆತನು ನಿನ್ನ ಪ್ರಾಂತದೊಳಗೆ ಸೌಭಾಗ್ಯವನ್ನುಂಟುಮಾಡುತ್ತಾನೆ; ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.


ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು.


ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷೆ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಜೇನೂ ಸಿಕ್ಕುತ್ತವೆ.


ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಅದು - ರೂಪಾಯಿಗೆ ಒಂದು ಸೇರು ಗೋದಿ; ರೂಪಾಯಿಗೆ ಮೂರು ಸೇರು ಜವೆ ಗೋದಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡ ಎಂದು ಹೇಳಿತು.


ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಕ್ಕೆ ಬಿದ್ದು - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ ಅಂದಳು.


ಮತ್ತು ಮಾರ್ಥಳು ಯೇಸುವಿಗೆ - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ;


ಅದಕ್ಕೆ ಫಿಲಿಪ್ಪನು - ಒಬ್ಬೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೆ ಇನ್ನೂರು ಹಣದ ರೊಟ್ಟಿಯಾದರೂ ಸಾಲದು ಅಂದನು.


ಯೆಹೂದ್ಯರೂ ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ವಿುನ್ನೀಥಿನ ಗೋದಿ ಕಂಡಸಕ್ಕರೆ ಜೇನು ಎಣ್ಣೆ ಸುಗಂಧತೈಲ ಈ ಸಾಮಗ್ರಿಗಳನ್ನು ನಿನಗೆ ಸೇರಿಸಿದರು.


ಆತನನ್ನು ಪದೇಪದೇ ಪರೀಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಕರಕರೆಗೊಳಿಸಿದರು.


ಆಗ ಎಲೀಷನು ಅವನಿಗೆ - ಯೆಹೋವನ ವಾಕ್ಯವನ್ನು ಕೇಳು; ಆತನು - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು ಅನ್ನುತ್ತಾನೆ ಎಂದು ಹೇಳಿದನು.


ಇದಲ್ಲದೆ ಅವರು ರಥಾಶ್ವಗಳಿಗೋಸ್ಕರವೂ ಸವಾರಿಕುದುರೆಗಳಿಗೋಸ್ಕರವೂ ನೇಮಕವಾದಷ್ಟು ಜವೆಗೋದಿಯನ್ನೂ ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೆ ತಂದೊಪ್ಪಿಸುತ್ತಿದ್ದರು.


ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಪಾನಕ್ಕಾಗಿ ದ್ರಾಕ್ಷೆಯ ರಕ್ತರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.


ತರುವಾಯ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಕೂತುಕೊಂಡವರಿಗೆ ಹಂಚಿ ಕೊಟ್ಟನು; ಅದರಂತೆ ಮೀನುಗಳಲ್ಲಿಯೂ ಅವರಿಗೆ ಬೇಕಾದಷ್ಟು ಹಂಚಿಕೊಟ್ಟನು.


ಅವರು ಭೂವಿುಗೆ ಇಳಿದಾಗ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನೂ ರೊಟ್ಟಿ ಸಹಿತವಾಗಿ ಕಂಡರು.


ಯೇಸು ಅವರಿಗೆ - ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ ಎಂದು ಹೇಳಲು


ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು; ಹಾಗೆಯೇ ಮೀನನ್ನೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು